ತಮಿಳುನಾಡಿಗೆ ನೀರು ಹರಿಸುವುದು ಸೂಕ್ತವಲ್ಲ : ಎಚ್‍ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

kumaraswami

ಮಂಡ್ಯ,ಸೆ.1-ಕೆಆರ್‍ಎಸ್ ಡ್ಯಾಮ್‍ನಲ್ಲಿ ನೀರು ಕಡಿಮೆ ಇರುವುದರಿಂದ ತಮಿಳುನಾಡಿಗೆ ನೀರು ಹರಿಸುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ನಾಳೆ ನಡೆಯಲಿರುವ ತಮ್ಮ ಮಗ ನಟಿಸುತ್ತಿರುವ ಜಾಗ್ವಾರ್ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭದ ಕಾರ್ಯ ವೈಖರಿಗಳನ್ನು ಪೂರ್ವಭಾವಿಯಾಗಿ ವೀಕ್ಷಿಸಿ ಪರಿಶೀಲನೆ ನಡೆಸಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ಕೃಷಿ ಚಟುವಟಿಕೆಗಳಿಗೆ ಡ್ಯಾಂನಿಂದ ನೀರು ಬಿಡದಿದ್ದರೆ ಈ ಭಾಗದ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಒಂದು ವೇಳೆ ನೀರು ಬಿಡದ ಪಕ್ಷದಲ್ಲಿ ರೈತರಿಗೆ ಒಂದು ಎಕರೆಗೆ 10 ಸಾವಿರ ಪರಿಹಾರ ಹಣವನ್ನು ಸರ್ಕಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಬಿಬಿಎಂಪಿ ದೋಸ್ತಿ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು ಬಿಬಿಎಂಪಿ ಚುಕ್ಕಾಣಿ ಹಿಡಿಯಲು ಯಾವ ಪಕ್ಷದೊಂದಿಗೆ ಕೈಜೋಡಿಸಬೇಕು ಎಂಬಂತೆ ಸದ್ಯ ತೀರ್ಮಾನಿಸಿಲ್ಲ. ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ವಿಧಾನಸಭಾ ಚುನಾವಣೆ ವೇಳೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಎಲ್ಲಾ ಭಾಗಗಳಲ್ಲಿ ಬಲಪಡಿಸುವ ಯೋಜನೆ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ನೂತನ ನಿವಾಸದಲ್ಲಿ ವಾಸ್ತವ್ಯವಿದ್ದು ಪಕ್ಷದ ಕಾರ್ಯಕರ್ತರೊಂದಿಗೆ ಈ ಭಾಗದ ಎಲ್ಲ ಹಳ್ಳಿಗಳಿಗೂ ಪ್ರವಾಸ ಕೈಗೊಂಡು ಪಕ್ಷವನ್ನು ಬಲಪಡಿಸುವ ಕಾರ್ಯ ಮಾಡಲಿದ್ದೇನೆ ಎಂದು ತಿಳಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin