ಪತ್ನಿಯನ್ನು ಕೊಂದು ಪತಿ ಪರಾರಿ

ಈ ಸುದ್ದಿಯನ್ನು ಶೇರ್ ಮಾಡಿ

murder

ಆನೇಕಲ್, ಸೆ.1- ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿ ಪತಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂಬಳಿಪುರದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಮಲ್ಲಿಕಾ ಎಂದು ತಿಳಿದಿದೆ.ಪ್ರಸ್ತುತ ಈಕೆಯ ಪತಿ ನಾಗೇಶ ತಲೆಮರೆಸಿಕೊಂಡಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ.ಕಳೆದ ರಾತ್ರಿ ದಂಪತಿಯ ಮಧ್ಯೆ ಜಗಳವಾಗಿತ್ತು. ಇದು ವಿಕೋಪಕ್ಕೆ ತಿರುಗಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

► Follow us on –  Facebook / Twitter  / Google+

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin