ಲೈಂಗಿಕ ಕಿರುಕುಳ : ಶಿಕ್ಷಕ ಅಮಾನತು

ಈ ಸುದ್ದಿಯನ್ನು ಶೇರ್ ಮಾಡಿ

Rape

 

ದಾವಣಗೆರೆ, ಸೆ.1- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನೋರ್ವನನ್ನು ಶಿಕ್ಷಣ ಇಲಾಖೆ ಉಪನಿರ್ದೇಶಕರು ಅಮಾನತುಪಡಿಸಿ ಆದೇಶ ಹೊರಡಿಸಿದ್ದಾರೆ.ತಾಲೂಕಿನ ಎಡಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ನಾಗರಾಜ್, 5 ಮತ್ತು 6ನೆ ತರಗತಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಪೋಷಕರು ಮತ್ತು ಎಸ್‍ಡಿಎಂಸಿ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.ಈ ದೂರಿನನ್ವಯ ತನಿಖೆ ನಡೆಸಿದ ಡಿಡಿಪಿಐ ಪ್ರೇಮಾ ಅವರು ಶಿಕ್ಷಕ ನಾಗರಾಜ್‍ನನ್ನು ಲೈಂಗಿಕ ಕಿರುಕುಳ ಆರೋಪದಡಿ ಅಮಾನತುಗೊಳಿಸಿದ್ದಾರೆ.

 

► Follow us on –  Facebook / Twitter  / Google+

 

Facebook Comments

Sri Raghav

Admin