ಮದ್ಯ ದೊರೆ ಮಲ್ಯ ಅವರ 6,630 ಕೋಟಿ ರೂ. ಆಸ್ತಿ ಜಪ್ತಿ

ಈ ಸುದ್ದಿಯನ್ನು ಶೇರ್ ಮಾಡಿ

Malya-001

ನವದೆಹಲಿ ಸೆ.03 : ವಿವಿಧ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಮರುಪಾವತಿಸದೆ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರ 6,630 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಶನಿವಾರ ಜಾರಿ ನಿರ್ದೇಶಾನಲಯ(ಇಡಿ) ಜಪ್ತಿ ಮಾಡಿದೆ. ಟೈಮ್ಸ್ ನೌ ವರದಿ ಪ್ರಕಾರ, ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ವಿಜಯ್ ಮಲ್ಯ ಅವರ ಮಂದ್ವಾ, ಬೆಂಗಳೂರು, ಯುನೈಟೆಡ್ ಬ್ರೆವರೀಸ್ ಲಿಮಿಟೆಡ್ ಮತ್ತು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಗೆ ಸೇರಿದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿರುವ 200 ಕೋಟಿ ಮೌಲ್ಯ ಒಂದು ಫಾರ್ಮ್ ಹೌಸ್, ಬೆಂಗಳೂರಿನಲ್ಲಿರುವ 800 ಕೋಟಿ ಮೌಲ್ಯದ ಅಪಾರ್ಟ್ ಮೆಂಟ್, ಮಾಲ್, ಹಾಗೂ ಯುಬಿಎಲ್ ಮತ್ತು ಯುಎಸ್ ಎಲ್ ನ 3000 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.  ಮದ್ಯದ ದೊರೆ ಮಲ್ಯ ಬ್ಯಾಂಕ್ ಗಳಿಗೆ 9 ಸಾವಿರ ಕೋಟಿ ರೂಪಾಯಿ ಸಾಲ ಮರುಪಾವತಿಸಬೇಕಾಗಿದೆ. ಮಾರ್ಚ್ ನಲ್ಲಿ ಭಾರತದಿಂದ ತಲೆಮರೆಸಿಕೊಂಡಿದ್ದ ಮಲ್ಯ ಸದ್ಯ ಲಂಡನ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಭಾರತ ಸರ್ಕಾರ ಮಲ್ಯ ಅವರ ಪಾಸ್ ಪೋರ್ಟ್ ಅನ್ನು ರದ್ದುಪಡಿಸಿದೆ. ಅಲ್ಲದೆ ಮುಂಬೈ ಕೋರ್ಟ್ ಮಲ್ಯ ಅವರನ್ನು ಘೋಷಿತ ಅಪರಾಧಿ ಎಂದು ಘೋಷಿಸಿದೆ.

► Follow us on –  Facebook / Twitter  / Google+

Facebook Comments

Sri Raghav

Admin