ತಮಿಳುನಾಡಿಗೆ ನೀರು ಹರಿಸಿದರೆ ಕೆಆರ್’ಎಸ್’ಗೆ ಮುತ್ತಿಗೆ: ಜಿ.ಮಾದೇಗೌಡ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Madegowsaಮಂಡ್ಯ, ಸೆ.6- ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸಿದರೆ ಕೆಆರ್’ಎಸ್’ಗೆ ಮುತ್ತಿಗೆ ಹಾಕುವುದಾಗಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಎಚ್ಚರಿಕೆ ನೀಡಿದ್ದಾರೆ.  ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ವಿರುದ್ಧ ಮಂಡ್ಯ ಬಂದ್ಗೆ ಕರೆ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀರ್ಪು ಅವೈಜ್ಞಾನಿಕವಾಗಿದ್ದು, ಸರ್ಕಾರ ವಾಸ್ತವ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡುವಲ್ಲಿ ಸಂಪೂರ್ಣವಾಗಿ ಎಡವಿದೆ.  ಆದೇಶದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ಗೆ ನೀರು ಬಿಟ್ಟರೆ ಜಲಾಶಯಕ್ಕೆ ಸಾವಿರಾರು ರೈತರೊಂದಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

ಕಾವೇರಿ ಹೋರಾಟ ಜಿಲ್ಲೆಯಲ್ಲಿ ವಿಫಲವಾಗುತ್ತಿರುವುದಕ್ಕೆ ನಮ್ಮ ಸಂಘಟನೆಗಳು ವಿಘಟನೆಯಾಗುತ್ತಿರುವುದು ಕಾರಣ. ನಾವೆಲ್ಲರೂ ಈಗ ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ. ಮನೆಗೊಬ್ಬರಂತೆ ಕಾವೇರಿ ಹೋರಾಟಕ್ಕೆ ಬರಬೇಕು ಎಂದು ಕರೆ ನೀಡಿದರು.   ಇದು ಒಂದು ದಿನದ ಬಂದ್ಗೆ ಸೀಮಿತವಾಗಿರುವುದಿಲ್ಲ. ಎಲ್ಲಿಯವರೆಗೆ ನೀರು ನಿಲ್ಲುವುದಿಲ್ಲವೋ ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಮಾದೇಗೌಡ ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin