ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಲು ರೇಷ್ಮೆ ಬೆಳೆಗಾರರಿಗೆ ಕರೆ

ಈ ಸುದ್ದಿಯನ್ನು ಶೇರ್ ಮಾಡಿ

chikbalapura

ಚಿಕ್ಕಬಳ್ಳಾಪುರ, ಸೆ.7-ರೇಷ್ಮೆ ಉತ್ಪಾದನೆಯಿಂದಲೂ ರೈತರಿಗೆ ಹೆಚ್ಚಿನ ಲಾಭ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಒದಗಿಸುತ್ತಿರುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಸಲಹೆ ನೀಡಿದರು. ತಾಲೂಕಿನ ಹೊಸಹುಡ್ಯದಲ್ಲಿ ಜಿ.ಪಂ ಮತ್ತು ರೇಷ್ಮೆ ಇಲಾಖೆ ವತಿಯಿಂದ ಆಯೋಜಿಸಿದ್ದ ವಿವಿಧ ಯೋಜನೆಗಳು ಮತ್ತು ದ್ವಿತಳಿ ರೇಷ್ಮೆ ಸಾಕಾಣಿಕೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯ ಕಾಂಗ್ರೆಸ್ ಸರ್ಕಾರವು ಹೈನುಗಾರಿಕೆ ಮತ್ತು ರೇಷ್ಮೆ ಕೃಷಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಅನೇಕ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಕೈಗೊಳ್ಳುತ್ತಿದೆ. ಕೋಟ್ಯಂತರ ರೂ ಅನುದಾನವನ್ನು ಖರ್ಚು

 

ಮಾಡುತ್ತಿದೆ. ಆದರೆ, ಇವು ಸಕಾಲದಲ್ಲಿ ರೈತರನ್ನು ತಲುಪಿದಾಗ ಮಾತ್ರ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ತಾ.ಪಂ.ಅಧ್ಯಕ್ಷ ಬಿ.ಎಂ.ರಾಮುಸ್ವಾಮಿ ಮಾತನಾಡಿ, ತಮಗೆ ಸಿಗುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಮೊದಲು ರೈತರಲ್ಲಿ ತಿಳಿವಳಿಕೆ ಇರಬೇಕು. ಇದಕ್ಕೆ ರೈತರು ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದುಕೊಳ್ಳಲು ಉತ್ತಮ ಬಾಂಧವ್ಯವನ್ನು ಹೊಂದಿರಬೇಕು ಎಂದು ಹೇಳಿದರು.ತಾ.ಪಂ.ನಾಮ ನಿರ್ದೇಶಿತ ಸದಸ್ಯ ಜಗದೀಶ್, ಮಾಜಿ ಅಧ್ಯಕ್ಷ ಪಿ.ಎ.ಮೋಹನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

 

Follow us on –  Facebook / Twitter  / Google+

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin