ತಮಿಳುನಾಡು ಹೊರತುಪಡಿಸಿ ರಾಜ್ಯದ ಎಲ್ಲಾ ಕಡೆ ಕೆಎಸ್‍ಆರ್‍ಟಿಸಿ ಸಂಚಾರ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

KSRTC

ಬೆಂಗಳೂರು, ಸೆ.14- ತಮಿಳುನಾಡು ಹೊರತು ಪಡಿಸಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಸ್ ಸಂಚಾರ ಯಥಾರೀತಿ ಆರಂಭಗೊಂಡಿದೆ. ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆ ಬಸ್ ಸಂಚಾರ ಆರಂಭಗೊಂಡಿದೆ ಎಂದು ಕೆಎಸ್‍ಆರ್‍ಟಿಸಿ ಮೂಲಗಳು ತಿಳಿಸಿವೆ. ಬೆಂಗಳೂರು ಮಹಾನಗರದಲ್ಲಿ ಬಿಎಂಟಿಸಿ ಬಸ್ ಸೇವೆ ಯಥಾರೀತಿ ಬೆಳಗ್ಗೆಯಿಂದ ಮುಂದುವರೆದಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಕೆಲವೆಡೆ ಬಸ್ ಸಂಚಾರ ವಿರಳವಾಗಿದ್ದುದು ಕಂಡು ಬಂದಿತು. ಬಸ್ ನಿಲ್ದಾಣಗಳಲ್ಲೂ ಕೂಡ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.

ಮೈಸೂರು-ಬೆಂಗಳೂರು ನಡುವಿನ ಹೆದ್ದಾರಿಯಲ್ಲಿ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್ ಸಂಚಾರ ಯಥಾರೀತಿ ಆರಂಭಗೊಂಡಿದ್ದರೂ ಪ್ರಯಾಣಿಕರು ಹಾಗೂ ಬಸ್‍ಗಳ ಸಂಖ್ಯೆ ಕಡಿಮೆ ಇದ್ದದ್ದು ಕಂಡು ಬಂತು. ಕಾವೇರಿ ಜಲಾನಯನ ಭಾಗದಿಂದ ತಮಿಳುನಾಡಿಗೆ ನೀರು ಬಿಡಬೇಕೆಂಬ ಸುಪ್ರೀಂಕೋರ್ಟ್‍ನ ಆದೇಶದ ಹಿನ್ನೆಲೆಯಲ್ಲಿ ಉಂಟಾದ ಗಲಭೆಯಿಂದ ಕಳೆದ ಎರಡು ದಿನಗಳಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಪ್ರಯಾಣಿಕರು ದೂರದೂರುಗಳಿಗೆ ತೆರಳಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

► Follow us on –  Facebook / Twitter  / Google+

Facebook Comments

Sri Raghav

Admin