ಅಕ್ರಮ ಗಣಿಗಾರಿಕೆ : ಎರಡು ಟ್ರ್ಯಾಕ್ಟರ್-ಲಾರಿ ವಶ

ಈ ಸುದ್ದಿಯನ್ನು ಶೇರ್ ಮಾಡಿ

arrest

ಶ್ರೀರಂಗಪಟ್ಟಣ,ಸೆ.16-ತಾಲ್ಲೂಕಿನ ಅಂಗಾರಹಳ್ಳಿಯ ಹೊರವಲಯದ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆಯಲ್ಲಿ ತೊಡಗಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಲಾರಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯಾಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ವಾಹನಗಳ ಮೇಲೆ ದಾಳಿ ಮಾಡಿದ್ದು , ಸ್ಥಳದಲ್ಲಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದ್ದು , ಮುಂದಿನ ಕ್ರಮ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin