ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಹೊತ್ತಿ ಉರಿದ 4 ಅಂತಸ್ತಿನ ಕಟ್ಟಡ

ಈ ಸುದ್ದಿಯನ್ನು ಶೇರ್ ಮಾಡಿ

Fire-1

ಬೆಂಗಳೂರು, ಸೆ.16- ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ನಾಲ್ಕು ಅಂತಸ್ತಿನ ಕಟ್ಟಡ ಹೊತ್ತಿ ಉರಿದು ಎರಡು ಬೈಕ್ಗಳು ಭಸ್ಮವಾಗಿರುವ ಘಟನೆ ಚಿಕ್ಕಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿನ ನಾಲ್ಕು ಅಂತಸ್ತಿನ ಕಟ್ಟಡದ ಕೆಳಮಹಡಿಯಲ್ಲಿ ಮಾಯಾ ಎಲೆಕ್ಟ್ರಾನಿಕ್ಸ್ ಅಂಡ್ ಆಕ್ಸಸರೀಸ್ ಎಂಬ ಅಂಗಡಿಯಿದ್ದು, ಇಂದು ಮುಂಜಾನೆ 4 ಗಂಟೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಅಂಗಡಿಯಲ್ಲಿ ಸಂಗ್ರಹಿಸಲಾಗಿದ್ದ ಎಲೆಕ್ಟ್ರಾನಿಕ್ಸ್ ವಸ್ತುಗಳು ಸ್ಫೋಟಗೊಂಡಿದ್ದರಿಂದ ಬೆಂಕಿಯ ಕಾವು ಹೆಚ್ಚಾಗಿ ಅದರ ಕೆನ್ನಾಲಿಗೆ ಕಟ್ಟಡ ಪೂರ್ತಿ ಆವರಿಸಿ ಹೊತ್ತಿ ಉರಿಯತೊಡಗಿದೆ.

Fire-3

ನಾಲ್ಕು ಅಂತಸ್ತಿನ ಕಟ್ಟಡದ ಪೈಕಿ ಮೂರು ಮಹಡಿಯಲ್ಲಿ ಜನರು ವಾಸಿಸುತ್ತಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು 15 ವಾಹನಗಳೊಂದಿಗೆ ಆಗಮಿಸಿ ಕಟ್ಟಡದಲ್ಲಿದ್ದವರನ್ನೆಲ್ಲ ಹೊರಗೆ ಕರೆತಂದು ಬೆಂಕಿ ನಂದಿಸುವಲ್ಲಿ ನಿರತರಾದರು. ಚಿಕ್ಕಪೇಟೆ ಪೊಲೀಸರೂ ಸ್ಥಳಕ್ಕೆ ದೌಡಾಯಿಸಿದ್ದರು. ಬೆಂಕಿಯ ತೀವ್ರತೆಗೆ ಎರಡು ಬೈಕ್ಗಳು ಭಸ್ಮವಾಗಿದ್ದಲ್ಲದೆ, ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ. ಮುನ್ನೆಚ್ಚರಿಕೆಯಾಗಿ ಅಭಿನವ್ ಥಿಯೇಟರ್ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಎಲೆಕ್ಟಿಕಲ್ ವಸ್ತುಗಳು ಸ್ಫೋಟಗೊಂಡಿದ್ದರಿಂದ ಅಕ್ಕಪಕ್ಕದ ಕಟ್ಟಡಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿರುವುದಲ್ಲದೆ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

Fire-4

ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಚಿಕ್ಕಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Fire-5

Fire-2

► Follow us on –  Facebook / Twitter  / Google+

Facebook Comments

Sri Raghav

Admin