ಬೆಳಗಾವಿಯಲ್ಲಿ ಕೈಗಾರಿಕೆಗೆ ವಿಫುಲ ಅವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

BELAGAVI-VIPULA
ಬೆಳಗಾವಿ,ಸೆ.17- ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಇದುವರೆಗು 1.77 ಲಕ್ಷ ಕೋಟಿ ಹಣ ವೇಯಿಸಿದೆ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಆರ್.ವಿ ದೇಶಪಾಂಡೆ ಹೇಳಿದರು.ಅವರು ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲೆಯ ಕೈಗಾರಿಕೆಗಳ ಹಾಗೂ ಕೈಗಾರಿಕಾ ಸಂಘಟನೆಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಬೆಳಗಾವಿಯಲ್ಲಿ ಕೈಗಾರಿಕೆ ಬೆಳೆಯಲು ವಿಫುಲ ಅವಕಾಶಗಳಿದ್ದು ಇದರ ಸದ್ಬಳಕೆಗೆ ಸ್ಥಳೀಯರು ಮುಂದಾಗಬೇಕು ಎಂದು ಹೇಳಿದರು.  ಸರ್ಕಾರವು ಕೈಗಾರಿಕೆಗಳು, ಐಟಿ, ಬಿಟಿ ಬೆಂಗಳೂರು ಕೇಂದ್ರಿಕೃತ ವಾಗಬಾರದು ಎಂಬ ದ್ರಷ್ಟಿಯಿಂದ ಕೋಲಾರ ತುಮಕೂರು ಮೈಸೂರು ಮತ್ತು ಬೆಳಗಾವಿ ಭಾಗಗಳಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ವತ್ತು ನೀಡಲಾಗುತ್ತಿದೆ. ಅಲ್ಲದೆ ಬೃಹತ್ ಉದ್ಯಮಿಗಳಿಗೆ ಆದ್ಯತೆ ನೀಡದೆ ಸ್ಥಳೀಯ ಉದ್ಯಮಿಗಳಿಗೆ ಹೆಚ್ಚು ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಜಿಲ್ಲೆಯಲ್ಲಿ 624 ಕೈಗಾರಿಕಾ ಘಟಕಗಳಿಗೆ ಇದುವರೆಗು ವಟ್ಟು 3000 ಕೋಟಿ ಹಣ ಹೂಡಿಕೆ ಮಾಡಲಾಗಿದ್ದು, ಇದರ ಸದ್ಬಳಕೆಗೆ ಮುಂದಾಗಬೇಕು ಎಂದು ಅವರು ಹೇಳಿದರು.

ಕೈಗಾರಿಕೆ ಇಲಾಖೆಯಲ್ಲಿ ಅರ್ಜಿಗಳ ಸ್ವೀಕಾರ, ನಿವೇಶನ ಹಂಚಿಕೆ ಮತ್ತಿತರ ಕಾರ್ಯಗಳಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಎಲ್ಲ ಕಾರ್ಯಗಳನ್ನ ಆನ್ ಲೈನ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಬೆಳಗಾವಿ ಭಾಗದಲ್ಲಿ ಕೊಲ್ಲಾಪುರದ ಕೈಗಾರಿಕೋದ್ಯಮಿಗಳು ಕೈಗಾರಿಕೆಗಳ ಸ್ಥಾಪನೆಗೆ ಆಸಕ್ತಿ ತೋರಿದ್ದು 248 ಏಕ್ರೆ ಭೂಮಿಯ ಸ್ವಾಧೀನ ಪ್ರಕ್ರೀಯೆ ಚಾಲನೆಯಲ್ಲಿಒದೆ ಎಂದು ಅವರು ಹೇಳಿದರು. ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಎನ್. ಜಯರಾಮ ಸೇರಿದಂತೆ ಕೈಗಾರಿಕಾ ಇಲಾಖೆ ಹಿರಿಯ ಅಧಿಕಾರಿಗಳು, ಕೈಗಾರಿಕಾ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು

 

► Follow us on –  Facebook / Twitter  / Google+

Facebook Comments

Sri Raghav

Admin