ಹೃದಯಾಘಾತದಿಂದ ಸಾತನೂರು ಗ್ರಾಪಂ ಮಾಜಿ ಸದಸ್ಯ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

heart-problem

ಕನಕಪುರ, ಸೆ.17- ಸಾತನೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮಹದೇವು(44) ಉ.ಬುಲೆಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಕಳೆದ 5 ವಷಗಳ ಹಿಂದೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ್ದ ಇವರ ಪತ್ನಿ ಕೂಡ ಗ್ರಾಪಂ ಸದಸ್ಯರಾಗಿದ್ದರು.ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಶಾಸಕ ಕಾಡಿಹಳ್ಳಿ ಶಿವಲಿಂಗೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎಂ.ವಿಶ್ವನಾಥ, ತಾಪಂ ಮಾಜಿ ಸದಸ್ಯ ಕಬ್ಬಾಳೇಗೌಡ, ಪ್ರಕಾಶ್, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ್, ಜೆಡಿಎಸ್ ತಾಲೂಕು ಅಧ್ಯಕ್ಷ ಸಿದ್ದಮರೀಗೌಡ, ಮುಖಂಡರಾದ ಚಿನ್ನಸ್ವಾಮಿ, ಬಿ.ಎಸ್.ಗೌಡ, ಸ್ಟುಡಿಯೊಚಂದ್ರು ಸಂತಾಪ ವ್ಯಕ್ತಪಡಿಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin