ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಟೆರರ್ ಅಟ್ಯಾಕ್ : 17 ಕ್ಕೇರಿದ ಹುತಾತ್ಮ ಯೋಧರ ಸಂಖ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Attack

ಶ್ರೀನಗರ, ಸೆ.18-ಇಂದು ಬೆಳ್ಳಂಬೆಳಿಗ್ಗೆಯೇ ಕಾಶ್ಮೀರ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಆತ್ಮಾಹುತಿ ದಾಳಿಯಲ್ಲಿ ಭಾರತೀಯ ಸೇನಾಪಡೆಯ 17 ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ. ಇದೇ ವೇಳೆ ಸೇನಾಪಡೆ ದಿಟ್ಟತನದ ಪ್ರತಿ ದಾಳಿ ನಡೆಸಿ ನಾಲ್ವರು ಉಗ್ರರನ್ನು ಹೊಡೆದುರುಳಿದೆ. ಈ ಕಾರ್ಯಾಚರಣೆಯಲ್ಲಿ 20ಕ್ಕೂ ಹೆಚ್ಚು ಸೈನಿಕರು ತೀವ್ರ ಗಾಯಗೊಂಡಿದ್ದು, ಇವರಲ್ಲಿ ಕೆಲವರ ಸ್ಥಿತಿ ಸ್ಥಿತಿ ಗಂಭೀರವಾಗಿದೆ.   ಘಟನೆ ಹಿನ್ನೆಲೆಯಲ್ಲಿ ತಮ್ಮ ರಷ್ಯಾ ಮತ್ತು ಅಮೆರಿಕ ಪ್ರವಾಸ ಮುಂದೂಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಉನ್ನತಾಧಿಕಾರಿಗಳ ತುರ್ತು ಸಭೆ ನಡೆಸಿದ್ದಾರೆ. ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಸುಹಾಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗೋವಾದಲ್ಲಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸಂಜೆ ಉರಿ ವಲಯಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಲಿದ್ದಾರೆ.

ಘಟನೆ ವಿವರ : ರಾಜಧಾನಿ ಶ್ರೀನಗರದಿಂದ 102 ಕಿ.ಮೀ. ದೂರದ ಉರಿ ಪಟ್ಟಣದ 12ನೇ ಆರ್ಮಿ ಬ್ರಿಗೇಡ್‍ನ ಕೇಂದ್ರ ಕಚೇರಿಗೆ ಕೆಲವೇ ಮೀಟರ್‍ಗಳಷ್ಟು ದೂರದಲ್ಲಿರುವ ಸೇನಾ ನೆಲೆ ಮೇಲೆ ಇಂದು ಬೆಳಿಗ್ಗೆ 4 ಗಂಟೆ ಸುಮಾರಿನಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರಗಾಮಿ ಸಂಘಟನೆಯ ಆತ್ಮಾಹುತಿ ದಳದ ನಾಲ್ವರು ಶಸ್ತ್ರಸಜ್ಜಿತ ಉಗ್ರಗಾಮಿಗಳು ದಾಳಿ ನಡೆಸಿದರು. ಭೀಕರ ಸ್ಫೋಟ ಮತ್ತು ಗುಂಡಿನ ದಾಳಿಯಲ್ಲಿ 17 ಯೋಧರು ಹುತಾತ್ಮರಾದರು. ಸೇನೆ ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು ಉಗ್ರರು ಹತದಾರರು. ಈ ಕಾರ್ಯಾಚರಣೆಯಲ್ಲಿ 20ಕ್ಕೂ ಹೆಚ್ಚು ಸೈನಿಕರಿಗೆ ಗಾಯಗಳಾಗಿವೆ ಎಂದು ಉನ್ನತಾಧಿಕಾರಿಗಳು ಹೇಳಿದ್ದಾರೆ.

ಭಾರೀ ಸ್ಫೋಟದಿಂದ ಡೋಗ್ರಾ ರೆಜಿಮೆಂಟ್‍ನ ಯೋಧರು ಮಲಗಿದ್ದ ಗುಡಾರ, ತಾತ್ಕಾಲಿಕ ಟೆಂಟ್‍ಗಳು ಮತ್ತು ಅಕ್ಕಪಕ್ಕದ ಬ್ಯಾರಕ್‍ಗಳಿಗೆ ಬೆಂಕಿ ಹತ್ತಿಕೊಂಡಿತು. ಉಗ್ರರ ದಾಳಿ ಮತ್ತು ನಂತರ ನಡೆದ ಗುಂಡಿನ ಚಕಮಕಿಯಿಂದ ಇಡೀ ಪ್ರದೇಶ ಅಕ್ಷರಶ: ರಣರಂಗವಾಯಿತು. ಬೆಂಕಿಯ ಕೆನ್ನಾಲಿಗೆಯೊಂದಿಗೆ ದಟ್ಟ ಹೊಗೆ ಇಡೀ ಸ್ಥಳವನ್ನು ಅವರಿಸಿತು. ಈ ಹಿಂದೆ ಕಾಶ್ಮೀರ ಕಣಿವೆಯಲ್ಲಿ ಪಠಾಣ್‍ಕೋಟ್‍ನಲ್ಲಿ ಸೇನಾ ನೆಲೆ ಮೇಲೆ ನಡೆದ ದಾಳಿ ಶೈಲಿಯಲ್ಲೇ ಉಗ್ರರು ಭಯಾನಕ ಆಕ್ರಮಣ ನಡೆಸಿದ್ದಾರೆ.   ಬಾರಾಮುಲ್ಲಾದ 19ನೇ ವಿಭಾಗೀಯ ಕೇಂದ್ರ ಕಚೇರಿಯಿಂದ ಹೆಲಿಕಾಪ್ಟರ್‍ಗಳನ್ನು ಸೇವೆಗೆ ಬಳಸಲಾಯಿತು. ತೀವ್ರ ಸುಟ್ಟಗಾಯಗಳು ಮತ್ತು ಗುಂಡೇಟಿಗೆ ಒಳಗಾಗಿರುವ 18 ಯೋಧರನ್ನು ಶ್ರೀನಗರದ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಚಿಂತಾಜನಕವಾಗಿದೆ.

ಇದೇ ಪ್ರದೇಶದ ಮೋಹ್ರಾದಲ್ಲಿ ಎರಡು ವರ್ಷಗಳ ಹಿಂದೆ ಉಗ್ರಗಾಮಿಗಳು ಇದೇ ರೀತಿಯ ದಾಳಿ ನಡೆಸಿದ್ದರು. ಡಿಸೆಂಬರ್ 5, 2014ರಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ 10 ಯೋಧರು ಹುತಾತ್ಮರಾಗಿದ್ದರು.  ಉರಿ ಪಟ್ಟಣದ ಸಲಮಾಬಾದ್ ನಲ್ಲಾ ಮೂಲಕ ನುಸುಳಿರುವ ಉಗ್ರಗಾಮಿಗಳು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಇಡೀ ಪ್ರದೇಶವನ್ನು ಬಂದ್ ಮಾಡಲಾಗಿದ್ದು, ನುಸುಳಿರುವ ಉಗ್ರರ ಬೇಟೆ ಕಾರ್ಯಾಚರಣೆ ಮುಂದುವರಿದಿದೆ.

ತುರ್ತುಸಭೆ :

Rajanath-Singh

ಕಾಶ್ಮೀರದಲ್ಲಿ ಭಯೋತ್ಪಾದಕರ ವಿಧ್ವಂಸಕ ಕೃತ್ಯದ ಸುದ್ದಿ ತಿಳಿಯುತ್ತಿದ್ದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಷ್ಯಾ ಮತ್ತು ಅಮೆರಿಕ ಪ್ರವಾಸವನ್ನು ಮುಂದೂಡಿ ಉನ್ನತಾಧಿಕಾರಿಗಳ ತುರ್ತು ಸಭೆ ನಡೆಸಿ ಕಾಶ್ಮೀರ ಪರಿಸ್ಥಿತಿಯನ್ನು ಅವಲೋಕಿಸಿದರು. ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಗೃಹ ಕಾರ್ಯದರ್ಶಿ, ಸೇನೆ, ಅರೆ ಸೇನಾ ಪಡೆಗಳು ಮತ್ತು ಗೃಹ ಸಚಿವಾಲಯದ ಉನ್ನತಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಭಯೋತ್ಪಾದಕರ ದಾಳಿಯಿಂದ ಉರಿ ವಲಯದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ರಾಜ್ಯಪಾಲರೊಂದಿಗೆ ಸಮಾಲೋಚಿಸಿದರು. ಭೂಸೇನೆ ಮುಖ್ಯಸ್ಥ ದಲ್ಬೀರ್ ಸಿಂಗ್ ಸುಹಾಗ್ ಉರಿ ವಲಯಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಾಮರ್ಶಿಸಿದರು.   ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯೋತ್ಪಾದಕರ ಅಟ್ಟಹಾಸ ಮತ್ತು ಯೋಧರ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಗೋವಾದಲ್ಲಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸ್ಥಳಕ್ಕೆ ಭೇಟಿ ನೀಡಿದ್ದರು.

ವ್ಯಾಪಕ ಖಂಡನೆ :

ಭಯೋತ್ಪಾದರ ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತಿತ್ತರು ತೀವ್ರವಾಗಿ ಖಂಡಿಸಿದ್ದಾರೆ. ವಿಶ್ವಸಂಸ್ಥೆ, ಅಲಿಪ್ತ ದೇಶಗಳು, ಅಮೆರಿಕ, ರಷ್ಯಾ, ಜರ್ಮನಿ, ಫ್ರಾನ್ಸ್ ಸೇರಿದಂತೆ ಅನೇಕ ರಾಷ್ಟ್ರಗಳು ಖಂಡಿಸಿವೆ.

saFasfgf

ಬಾರಾಮುಲ್ಲಾದ 19ನೇ ವಿಭಾಗೀಯ ಕೇಂದ್ರ ಕಚೇರಿಯಿಂದ ಹೆಲಿಕಾಪ್ಟರ್‍ಗಳನ್ನು ಸೇವೆಗೆ ಬಳಸಲಾಯಿತು. ತೀವ್ರ ಸುಟ್ಟಗಾಯಗಳು ಮತ್ತು ಗುಂಡೇಟಿಗೆ ಒಳಗಾಗಿರುವ ಯೋಧರನ್ನು ಶ್ರೀನಗರದ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.  ಇದೇ ಪ್ರದೇಶದ ಮೋಹ್ರಾದಲ್ಲಿ ಎರಡು ವರ್ಷಗಳ ಹಿಂದೆ ಉಗ್ರಗಾಮಿಗಳು ಇದೇ ರೀತಿಯ ದಾಳಿ ನಡೆಸಿದ್ದರು. ಡಿಸೆಂಬರ್ 5, 2014ರಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ 10 ಯೋಧರು ಹುತಾತ್ಮರಾಗಿದ್ದರು. ಉರಿ ಪಟ್ಟಣದ ಸಲಮಾಬಾದ್ ನಲ್ಲಾ ಮೂಲಕ ನುಸುಳಿರುವ ಉಗ್ರಗಾಮಿಗಳು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಇಡೀ ಪ್ರದೇಶವನ್ನು ಬಂದ್ ಮಾಡಲಾಗಿದ್ದು, ಇನ್ನುಳಿದ ಉಗ್ರರ ಬೇಟೆ ಕಾರ್ಯಾಚರಣೆ ಮುಂದುವರಿದಿದೆ.

ತುರ್ತುಸಭೆ :

ಕಾಶ್ಮೀರದಲ್ಲಿ ಭಯೋತ್ಪಾದಕರ ವಿಧ್ವಂಸಕ ಕೃತ್ಯದ ಸುದ್ದಿ ತಿಳಿಯುತ್ತಿದ್ದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಷ್ಯಾ ಮತ್ತು ಅಮೆರಿಕ ಪ್ರವಾಸವನ್ನು ಮುಂದೂಡಿ ಉನ್ನತಾಧಿಕಾರಿಗಳ ತುರ್ತು ಸಭೆ ನಡೆಸಿ ಕಾಶ್ಮೀರ ಪರಿಸ್ಥಿತಿಯನ್ನು ಅವಲೋಕಿಸಿದರು. ಭಯೋತ್ಪಾದಕರ ದಾಳಿಯಿಂದ ಉರಿ ವಲಯದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.  ಸೇನೆ ಮುಖ್ಯಸ್ಥ ದಲಬೀರ್‍ಸಿಂಗ್ ಸುಹಾಗ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಗೋವಾದಲ್ಲಿರುವ ರಕ್ಷಣಾ ಸಚಿವರು ಸಂಜೆ ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.

Uri-Attack

Facebook Comments

Sri Raghav

Admin