ಬಿಎಸ್ವೈ ಡಿನೋಟೀಫಿಕೇಷನ್ ಪ್ರಕರಣದ ವಿಚಾರಣೆ 5 ವಾರ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

YADIYURAPPA
ನವದೆಹಲಿ, ಸೆ.19- ಸರ್ಕಾರಿ ಭೂಮಿ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ರಾಜ್ಯಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಐದು ವಾರಗಳ ಕಾಲ ಮುಂದೂಡಿದೆ. ಈ ಪ್ರಕರಣ ಕುರಿತಂತೆ ಹೈಕೋರ್ಟ್ ವಜಾಗೊಳಿಸಿದ್ದ ಎಲ್ಲ 15 ಪ್ರಕರಣಗಳ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು. ಈ ಪ್ರಕರಣ ಕುರಿತ ವಾದ-ಪ್ರತಿವಾದ ಆಲಿಸಿದ ಪೀಠವು ವಿಚಾರಣೆಯನ್ನು ಐದು ವಾರಗಳ ಕಾಲ ಮುಂದೂಡಿತು.ಈ ಪ್ರಕರಣ ಕುರಿತಂತೆ ಹೈಕೋರ್ಟ್ ವಜಾಗೊಳಿಸಿದ್ದ ಎಲ್ಲ 15 ಪ್ರಕರಣಗಳ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು.

ಈ ಪ್ರಕರಣ ಕುರಿತ ವಾದ-ಪ್ರತಿವಾದ ಆಲಿಸಿದ ಪೀಠವು ವಿಚಾರಣೆಯನ್ನು ಐದು ವಾರಗಳ ಕಾಲ ಮುಂದೂಡಿತು. ಭೂಮಿ ಡಿನೋಟೀಫಿಕೇಷನ್ ಪ್ರಕರಣ ಕುರಿತು ಸಿಎಜಿ ವರದಿ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಯಡಿಯೂರಪ್ಪ ಅವರ ಮೇಲಿನ ಎಲ್ಲ 15 ಪ್ರಕರಣಗಳನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧದ ಕೇಸುಗಳ ರದ್ಧತಿ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಎಸ್‌ಐಟಿಗೆ (ವಿಶೇಷ ತನಿಖಾ ದಳ) ವರ್ಗಾಯಿಸಿದೆ.

► Follow us on –  Facebook / Twitter  / Google+

Facebook Comments

Sri Raghav

Admin