ಈಶ್ವರಪ್ಪಗೆ ಕಾಗೋಡು ಟಾಂಗ್

ಈ ಸುದ್ದಿಯನ್ನು ಶೇರ್ ಮಾಡಿ

kagodu

ಬೆಂಗಳೂರು, ಸೆ.20- ಕ್ರಾಂತಿಕಾರಿ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಹೆಸರನ್ನು ಯಾರು ಬೇಕಾದರೂ ಬಳಸಿಕೊಳ್ಳಬಹುದು. ಸರ್ಕಾರ ಇದಕ್ಕೆ ನಿರ್ಬಂಧ ವಿಸಿಲ್ಲ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಟಾಂಗ್ ನೀಡಿದರು.  ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಂಗೊಳ್ಳಿರಾಯಣ್ಣ ಅಭಿವೃದ್ಧಿ ಪ್ರಾಕಾರದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣನವರ ಹೆಸರಿನಲ್ಲಿ ಏನೋ ಮಾಡಲು ಹೊರಟಿದ್ದಾರೆ ಮಾಡಿಕೊಳ್ಳಲಿ. ರಾಯಣ್ಣನ ಹೆಸರು ಬಳಸಬೇಡಿ ಎಂದು ಸರ್ಕಾರ ನಿಷೇಧ ಹೇರಿಲ್ಲ ಎಂದರು. ಮಹಾತ್ಮಾಗಾಂ, ಅಂಬೇಡ್ಕರ್ ಅವರ ಹೆಸರುಗಳನ್ನು ಎಲ್ಲೆಡೆ ಬಳಸಿಕೊಳ್ಳಲಾಗುತ್ತಿದೆ.

ಕೆಲವರಂತೂ ಅಂಬೇಡ್ಕರ್ ಅವರ ಹೆಸರಿನಲ್ಲಿ ಲೇಟರ್‌ಹೆಡ್ ಮಾಡಿ ದಂಧೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ರಾಜ್ಯದ ಬರ ಪರಿಸ್ಥಿತಿ ವಿಶ್ಲೇಷಣೆಗಾಗಿ ಇದೇ 28ರಂದು ಸಭೆ ಕರೆಯಲಾಗಿದೆ. ಕಳೆದ ವಾರದ ಅಧ್ಯಯನದಂತೆ ರಾಜ್ಯದ 63 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಈ ತಿಂಗಳಾಂತ್ಯಕ್ಕೆ ಮತ್ತಷ್ಟು ಮಾಹಿತಿ ಪಡೆದು ಬರಪೀಡಿತ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗುವುದು ಎಂದರು. ಕಾವೇರಿ ನದಿ ವಿವಾದದಲ್ಲಿ ಪ್ರಧಾನಿ ಅವರು ಮಧ್ಯಪ್ರವೇಶಿಸಿಲು ಕಾನೂನಿನಲ್ಲಿ ಅವಕಾಶವಿದೆ. ಅಂತರ್‌ರಾಜ್ಯ ನದಿ ವಿವಾದ ಸೃಷ್ಟಿಯಾದಾಗ ಕೇಂದ್ರ ಸಾರ್ಕರ ಮಧ್ಯಪ್ರವೇಶ ಮಾಡಬೇಕಾಗುತ್ತದೆ ಎಂದ ಅವರು, ಕೇಂದ್ರ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ನಾನು ಎಲ್ಲಿಯೂ ಹೇಳಿಲ್ಲ. ಆ ರೀತಿ ಹೇಳಿಕೆ ನೀಡಲು ನನಗೆ ಕೆಲಸವಿಲ್ಲವೇ ಎಂದು ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು.

► Follow us on –  Facebook / Twitter  / Google+

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin