ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಕರಣಗೊಳಿಸಲು ಪಾಕ್ ವಿಫಲ ಯತ್ನ

ಈ ಸುದ್ದಿಯನ್ನು ಶೇರ್ ಮಾಡಿ

Pak-01

ವಿಶ್ವಸಂಸ್ಥೆ, ಸೆ.21-ಕಾಶ್ಮೀರದ ಉರಿ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ವಿಶ್ವದ ಅನೇಕ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿ ಮೂಲೆಗುಂಪಾಗುವ ಭೀತಿಯಲ್ಲಿರುವ ಪಾಕಿಸ್ತಾನ, ಪ್ರಮುಖ ಮುಖಂಡರೊಂದಿಗೆ ಚರ್ಚಿಸಿ ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಕರಣಗೊಳಿಸಲು ವಿಫಲ ಯತ್ನ ನಡೆಸುತ್ತಿದೆ. ವಿಶ್ವಸಂಸ್ಥೆಯ 71ನೆ ಸಾಮಾನ್ಯ ಮಹಾಧಿವೇಶನದ ಸಂದರ್ಭದಲ್ಲಿ ವಿಶ್ವದ ಬಹುತೇಕ ಎಲ್ಲ ನಾಯಕರೊಂದಿಗೆ ಚರ್ಚೆ ನಡೆಸಿದ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಕಾಶ್ಮೀರ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸಿ ಅಂತಾರಾಷ್ಟ್ರೀಕರಣಗೊಳಿಸಲು ಪ್ರಯತ್ನಿಸಿದರು.

ಅಮೆರಿಕ, ಯುನೈಟೆಡ್ ಕಿಂಗ್‍ಡಮ್, ಜಪಾನ್, ಟರ್ಕಿ ಸೇರಿದಂತೆ ವಿವಿಧ ದೇಶಗಳ ಅಧಿಪತಿಗಳೊಂದಿಗೆ ನಿನ್ನೆಯಿಂದಲೇ ಈ ವಿಷಯದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಧಾನಿ ಷರೀಫ್ ಜಪಾನ್ ಸಹವರ್ತಿ ಶಿನ್‍ಜೋ ಅಬೆ ಅವರ ಜತೆ ಕಾಶ್ಮೀರ ವಿಷಯ ಪ್ರಸ್ತಾಪಿಸಿದ್ದಾರೆ. ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆಗಳು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ವಿಶ್ವಸಂಸ್ಥೆಗೆ ಪಾಕಿಸ್ತಾನದ ರಾಜದೂತ ಮಲೀಹಾ ಲೋಧಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin