ಉತ್ತರ ಕಾಶ್ಮೀರದ ಅರಗಂ ಗ್ರಾಮದಲ್ಲಿ ಎನ್‍ಕೌಂಟರ್’ಗೆ ಇಬ್ಬರು ಉಗ್ರರು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

2Kiled

ಶ್ರೀನಗರ, ಸೆ.22-ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳ ಉಪಟಳ ಮುಂದುವರಿದಿದ್ದು, ಬಾಂದಿಪುರ ಜಿಲ್ಲೆಯಲ್ಲಿ ಭದ್ರತಾಪಡೆಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.   ಉತ್ತರ ಕಾಶ್ಮೀರದ ಅರಗಂ ಗ್ರಾಮದಲ್ಲಿ ಉಗ್ರರು ಇರುವ ಗುಪ್ತಚರ ಮೂಲಕ ಖಚಿತ ಮಾಹಿತಿ ಮೇರೆಗೆ ಯೋಧರು ಆ ಪ್ರದೇಶವನ್ನು ಸುತ್ತುವರೆದು ತೀವ್ರ ಶೋಧ ನಡೆಸಿದರು. ಈ ಸಂದರ್ಭದಲ್ಲಿ ಅಡಗಿ ಕುಳಿತ್ತಿದ್ದ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿದರು. ಯೋಧರು ಪ್ರತಿ ದಾಳಿ ಮಾಡಿದಾಗ ಗುಂಡಿನ ಚಕಮಕಿ ನಡೆದು ಇಬ್ಬರು ಉಗ್ರರು ಹತರಾದರು ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ಚಕಮಕಿ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿರುವ ಇನ್ನುಳಿದ ಉಗ್ರಗಾಮಿಗಳ ಬೇಟೆ ಕಾರ್ಯಾಚರಣೆ ಮುಂದುವರಿದಿದೆ.
ಈ ಮಧ್ಯೆ, ಪ್ರಕ್ಷುಬ್ಧಮಯ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ವಿಧಿಸಲಾಗಿರುವ ಕಫ್ರ್ಯೂ ಇಂದು 76ನೇ ದಿನಕ್ಕೆ ಕಾಲಿಟ್ಟಿದೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಪಟ್ಟಣದಲ್ಲಿ ಇಂದು ಕಫ್ರ್ಯೂ ಜಾರಿಗೊಳಿಸಲಾಗಿದೆ. ಪ್ರತ್ಯೇಕತಾವಾದಿಗಳು ಕರೆ ನೀಡಿರುವ ಪ್ರತಿಭಟನಾ ಮೆರವಣಿಗೆ ಹಿನ್ನೆಲೆಯಲ್ಲಿ ಶ್ರೀನಗರದ ಮೂರು ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕಫ್ರ್ಯೂ ವಿಧಿಸಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin