ಮಂಡ್ಯದಲ್ಲಿ ತೀವ್ರಗೊಂಡ ಹೋರಾಟ

ಈ ಸುದ್ದಿಯನ್ನು ಶೇರ್ ಮಾಡಿ

kauveri

ಮಂಡ್ಯ, ಸೆ.23-ಜಿಲ್ಲೆಯಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದ್ದು, ನಾನಾ ಕಡೆಗಳಲ್ಲಿ ರಸ್ತೆ ತಡೆ, ಧರಣಿ, ಪ್ರತಿಭಟನೆಗಳು ಇಂದೂ ಕೂಡ ಮುಂದುವರೆದಿದೆ.ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿ ಮತ್ತು ಸರ್ಕಾರಕ್ಕೆ ಬೆಂಬಲ ಸೂಚಿಸಿ ನ್ಯಾಯಾಲಯದ ಕಾರ್ಯಕಲಾಪ ಬಹಿಷ್ಕರಿಸಿ ಇಂದು ಜಿಲ್ಲಾ ವಕೀಲರ ಸಂಘ ಬಸವರಾಜ್ ಅವರ ನೇತೃತ್ವದಲ್ಲಿ ಮಂಡ್ಯದಿಂದ ಬೆಂಗಳೂರಿಗೆ ರ್ಯಾಲಿ ಹಮ್ಮಿಕೊಂಡಿತ್ತು.ಆದರೆ ಬೆಳಗ್ಗೆ ಇದಕ್ಕೆ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ವಕೀಲರು ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ವಿಷಯದಲ್ಲಿ ಯಾವುದೇ ರಾಜಕೀಯ ಬೇಡ. ನ್ಯಾಯಾಂಗ ನಿಂದನೆ ಭಯ ಪಡುವುದು ಬೇಡ. ಕನ್ನಂಬಾಡಿ ಅಣೆಕಟ್ಟಿನಿಂದ ಒಂದು ಹನಿ ನೀರು ಕೂಡ ತಮಿಳುನಾಡಿಗೆ ಬಿಡಬೇಡಿ ಎಂದು ಬಸವರಾಜ್ ಮನವಿ ಮಾಡಿದರು.

ಸೆಪ್ಟೆಂಬರ್ 27ರವರೆಗೂ ನಾವು ನ್ಯಾಯಾಲಯದ ಕಾರ್ಯಕಲಾಪ ಬಹಿಷ್ಕರಿಸಿದ್ದೇವೆ ಎಂದು ಇದೇ ವೇಳೆ ತಿಳಿಸಿದ್ದಾರೆ. ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾ.ಪಂ. ಅಧ್ಯಕ್ಷ ಸೇರಿದಂತೆ ಎಲ್ಲಾ ಸದಸ್ಯರು ಕಾವೇರಿ ವಿಷಯದಲ್ಲಿ ಆಗುತ್ತಿರುವ ಅನ್ಯಾಯ ಖಂಡಿಸಿ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಎಲ್ಲರೂ ಒಗ್ಗೂಡಿ ಉಪವಿಭಾಗಾಧಿಕಾರಿಗಳನ್ನು ಭೇಟಿ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲು ತೀರ್ಮಾನಿಸಿದ್ದಾರೆ.ಇನ್ನು ಸಂಜಯ್‍ವೃತ್ತದಲ್ಲಿ ಜಿ.ಮಾದೇಗೌಡ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಮುಂದುವರೆದಿದ್ದು, ನೂರಾರು ರೈತರು, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಇಂದು ಸಾಥ್ ನೀಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin