ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Rain-01

ಬೆಂಗಳೂರು, ಸೆ.23- ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದಿಂದ ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.  ಹೈದರಾಬಾದ್ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗಲಿದೆ. ರಾಯಚೂರು ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ವಿವಿಧೆಡೆ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಈ ಮಳೆ ಕಾವೇರಿ ಕಣಿವೆ ಪ್ರದೇಶದಲ್ಲಿ ಸುರಿಯುವ ಸಾಧ್ಯತೆ ಇಲ್ಲ.

► Follow us on –  Facebook / Twitter  / Google+

Facebook Comments

Sri Raghav

Admin