ಸಾಲ ಬಾಧೆ ತಾಳಲಾರದೆ ಇಬ್ಬರು ಅನ್ನದಾತರು ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

sucide

ಕೊರಟಗೆರೆ, ಸೆ.25-ಸಾಲ ಬಾಧೆಯಿಂದ ನೊಂದ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಲಂಬಾಣಿ ತಾಂಡಾ ಗ್ರಾಮದ ನಿವಾಸಿ ಭೀಮಾನಾಯಕ್(29), ಅಕ್ಕಜಳ್ಳಿ ಗ್ರಾಮದ ನಿವಾಸಿ ನರಸಿಂಹಮೂರ್ತಿ (35) ಆತ್ಮಹತ್ಯೆ ಮಾಡಿಕೊಂಡವರು. ಮಳೆಯನ್ನೇ ಆಧರಿಸಿ ಬೇಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಭೀಮಾ ನಾಯಕ್,  ವಡ್ಡಗೆರೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಿಂದ 50 ಸಾವಿರ ಮತ್ತು 1 ಲಕ್ಷದವರೆಗೂ ಕೈಸಾಲ ಪಡೆದು ತಮ್ಮ ಹತ್ತು ಎಕರೆ ಭೂಮಿಯಲ್ಲಿ ರಾಗಿ, ಶೇಂಗಾ, ಜೋಳ ಮತ್ತು ಭತ್ತದ ಬೆಳೆಗಳನ್ನು ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬೆಳೆ ಸಂಪೂರ್ಣವಾಗಿ ನಾಶವಾದ ಕಾರಣ ಸಾಲ ಮರುಪಾವತಿಸಲಾಗದೆ ಮನನೊಂದು ಮನೆಯಲ್ಲೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಕ್ಕಜಳ್ಳಿ ಗ್ರಾಮದ ನರಸಿಂಹಮೂರ್ತಿಯೂ ಕೂಡ ಮಳೆಯನ್ನೇ ನಂಬಿ ಬೆಳೆ ಬಿತ್ತಿದ್ದರು. ಆದರೆ ಮುಂಗಾರು ಮಳೆ ಸರಿಯಾಗಿ ಆಗದೆ ಬೆಳೆ ಸಂಪೂರ್ಣ ನಾಶವಾಗಿತ್ತು. ಇದರಿಂದ ನೊಂದು ತನ್ನ ತೋಟದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನಲ್ಲಿ ಮುಂಗಾರು ಮಳೆ ಸಂಪೂರ್ಣವಾಗಿ ವಿಫಲವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಸರ್ಕಾರ ಕೊರಟಗೆರೆ ತಾಲೂಕಿನ ಬೆಳೆ ನಷ್ಟವಾಗಿರುವ ಎಲ್ಲ ರೈತರಿಗೆ ಪರಿಹಾರ ನೀಡಬೇಕೆಂದು ತಾಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಸಿ.ರಾಮಯ್ಯ ಮತ್ತು ಭೂ ಮಂಜೂರಾತಿ ಸಮಿತಿ ಸದಸ್ಯ ಹಾಗೂ ದಲಿತ ಮುಖಂಡರಾದ ಎನ್.ಚಿಕ್ಕರಂಗಯ್ಯ ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕೊರಟಗೆರೆ ವೃತ್ತ ನಿರೀಕ್ಷಕ ಮುನಿರಾಜು ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin