ಅಕ್ರಮವಾಗಿ ಮರಳು ತುಂಬುತ್ತಿದ್ದ 3 ಟ್ರ್ಯಾಕ್ಟರ್ ವಶ

ಈ ಸುದ್ದಿಯನ್ನು ಶೇರ್ ಮಾಡಿ

maralu

ಹುಳಿಯಾರು, ಸೆ.26-ಅಕ್ರಮವಾಗಿ ಮರಳು ತುಂಬುತ್ತಿದ್ದ 3 ಟ್ರ್ಯಾಕ್ಟರ್ ಹಾಗೂ ದಾಸ್ತಾನು ಮಾಡಲಾಗಿದ್ದ 30 ಟ್ರ್ಯಾಕ್ಟರ್‍ನಷ್ಟು ಮರಳನ್ನು ಹುಳಿಯಾರು ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಕೆರೆಯಲ್ಲಿ ಅಕ್ರಮವಾಗಿ ಮರಳು ತುಂಬುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪಿಎಸ್‍ಐ ಪ್ರವೀಣ್‍ಕುಮಾರ್ ನೇತೃತ್ವದಲ್ಲಿ ಜಿಲ್ಲಾ ಅಪರಾಧ ವಿಭಾಗ ಮತ್ತು ಪೊಲೀಸರ ತಂಡ ದಿಢೀರ್ ದಾಳಿ ನಡೆಸಿ ಮರಳು ತುಂಬಿದ್ದ ಮೂರು ಟ್ರ್ಯಾಕ್ಟರ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

maralu2
ದಾಳಿಯ ವೇಳೆ ಟ್ರ್ಯಾಕ್ಟರ್‍ನ ಚಾಲಕ ಸೇರಿದಂತೆ ಮರಳು ತುಂಬುತ್ತಿದ್ದವರು ಪರಾರಿಯಾಗಿದ್ದಾರೆ.ನಂತರ ಹುಳಿಯಾರಿನ ವಿವಿಧ ತೆಂಗಿನ ತೋಟ, ಜಮೀನುಗಳಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಜಾಗಗಳ ಮೇಲೆ ಪೊಲೀಸ್ ತಂಡ ದಾಳಿ ನಡೆಸಿ ಸುಮಾರು 30 ಟ್ರ್ಯಾಕ್ಟರ್ ನಷ್ಟು ಮರಳನ್ನು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin