‘ಕಾವೇರಿ ಸಂಕಷ್ಟ ಪರಿಹರಿಸು ತಂದೆ’ : ಮಹದೇಶ್ವರನ ಮೊರೆಹೋದ ಸಿಎಂ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

CM-Mahade-shw-ad

ಮಲೆ ಮಹದೇಶ್ವರ, ಸೆ.26- ಕಾವೇರಿ ಸಂಕಷ್ಟದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೆ ಚಾಮರಾಜನಗರಕ್ಕೆ ಭೇಟಿ ನೀಡಿ ಚಾಮರಾಜೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳಿ ಮಲೈ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಸಮರ್ಪಿದರು. ಇಂದು ಬೆಳಗ್ಗೆ ಮಲೈ ಮಹದೇಶ್ವರನ ಸನ್ನಿಧಾನಕ್ಕೆ ತೆರಳಿದ ಅವರು, ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಮಲೈ ಮಹದೇಶ್ವರ ಪ್ರಾಧಿಕಾರ ರಚನೆಯಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ದೇವಸ್ಥಾನಕ್ಕೆ ಬರುವ ಆದಾಯವೂ ಹೆಚ್ಚಾಗಿದೆ. ಪ್ರಾಧಿಕಾರದಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವ ಭರವಸೆ ನೀಡಿದರು.

ಕಾವೇರಿ ವಿಚಾರವಾಗಿ ಇಂದು ನ್ಯಾಯಾಲಯದಲ್ಲಿ ನಮ್ಮ ವಕೀಲರು ಮಾರ್ಪಾಡು ಅರ್ಜಿಯನ್ನು ಸುಪ್ರೀಂಕೋರ್ಟ್‍ಗೆ ಸಲ್ಲಿಸಲಿದ್ದು, ಸಮರ್ಥ ರೀತಿಯಲ್ಲಿ ವಾದ ಮಂಡಿಸಲಿದ್ದಾರೆ. ಈ ಬಾರಿಯಾದರೂ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಅವರು ಹೇಳಿದರು.  ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಮಹದೇವ ಪ್ರಸಾದ್, ಸಂಸದ ಧೃವನಾರಾಯಣ್ ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin