ಕೊಪ್ಪಳದಲ್ಲಿ ಕರವೇ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

Koppala-01

ಕೊಪ್ಪಳ,ಸೆ.26- ಕನ್ನಡಿಗರಿಗೆ  ಉದ್ಯೋಗ  ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಇಬ್ಬರು ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಗಿಣಗೇರ ಗ್ರಾಮದ ಬಳಿ ಇರುವ ಹೊಸಪೇಟೆ ರಸ್ತೆಯಲ್ಲಿರುವ ಕಲ್ಯಾಣಿ ಸ್ಟೀಲ್ ಕಾರ್ಖಾನೆಯಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು.

ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಇದರಿಂದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ವಿಜಯಕುಮಾರ್ ಮತ್ತು ಬೆಂಬಲಿತ ಕಾರ್ಯಕರ್ತ ಬಸವರಾಜ್ ಹಳ್ಳ ತೀವ್ರವಾಗಿ ಹಲ್ಲೆಗೊಂಡಿದ್ದಾರೆ. ಪೊಲೀಸರ ಲಾಠಿಜಾರ್ಜ್ ಖಂಡಿಸಿ ಕರವೇ ಕಾರ್ಯಕರ್ತರ ಆಕ್ರೋಶ ಇನ್ನಷ್ಟು ಭುಗಿಲೆದಿದ್ದು, ಕಾರ್ಖಾನೆ ಮುಂಭಾಗ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಕರವೇ ಮುಖಂಡರನ್ನು ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಕೊಪ್ಪಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದು , ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin