ಬೆಂಗಳೂರಲ್ಲಿ ಡಬಲ್ ಮರ್ಡರ್ : ಹಾಡುಹಗಲೇ ಅತ್ತೆ-ಸೊಸೆಯ ಕತ್ತು ಕೊಯ್ದು ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

D-Murder

ಬೆಂಗಳೂರು, ಸೆ.26- ಉದ್ಯಮಿಯೊಬ್ಬರ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಅತ್ತೆ-ಸೊಸೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಹಾಡಹಗಲೇ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಸಂತನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿ ವಾಸವಾಗಿದ್ದ ಅತ್ತೆ ಸಂತೋಷಿ ಬಾಯಿ(59) ಹಾಗೂ ಸೊಸೆ ಲತಾ(38) ಬರ್ಬರವಾಗಿ ಕೊಲೆಯಾದ ದುರ್ದೈವಿಗಳು. ಇಂದು ಬೆಳಗ್ಗೆ 8 ಗಂಟೆಯಿಂದ 9 ಗಂಟೆ ಮಧ್ಯೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅತ್ತೆ ಹಾಗೂ ಸೊಸೆಯ ಕತ್ತು ಕೊಯ್ದು ಪರಾರಿಯಾಗಿದ್ದಾರೆ.
ಉದ್ಯಮಿ ಸಂಪತ್ ರಾಜ್ ಎಂಬುವರ ಮನೆಯಲ್ಲಿ ಈ ಭೀಕರ ಜೋಡಿ ಕೊಲೆ ನಡೆದಿದೆ. ಸಂಪತ್ ಅವರು ನಗರದ ಬಳೆಪೇಟೆಯಲ್ಲಿ ರಾಸಾಯನಿಕ ವಸ್ತುಗಳ ಅಂಗಡಿಯೊಂದನ್ನು ಇಟ್ಟುಕೊಂಡು ಅದರ ವಹಿವಾಟು ನಡೆಸುತ್ತಿದ್ದಾರೆ.

D-Murder-2

ಸುಮಾರು 40 ವರ್ಷಗಳಿಂದ ಇವರು ಬೆಂಗಳೂರಿನಲ್ಲಿ ವಾಸವಾಗಿದ್ದು , ಬೆಳಗ್ಗೆ ಎಂದಿನಂತೆ ಅಂಗಡಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಅವರ ಮನೆಗೆ ನುಗ್ಗಿ ಅತ್ತೆ-ಸೊಸೆಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.  ಅತ್ತೆ-ಸೊಸೆ ಮೈಮೇಲಿದ್ದ ಆಭರಣಗಳು ಹಾಗೇ ಇವೆ. ಮುಖದ ಮೇಲೆಲ್ಲ ಗಾಯದ ಗುರುತುಗಳಿವೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ಹಾಗೂ ಪಶ್ಚಿಮ ವಿಭಾಗದ ಹೆಚ್ಚುವರಿ ಆಯುಕ್ತ ಚರಣ್ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಜೋಡಿ ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಈ ಬಗ್ಗೆ ಹೈಗ್ರೌಂಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ.  ಯಕ್ತಿಕ ದ್ವೇಷದಿಂದಲೋ ಅಥವಾ ಹಣ-ಆಭರಣಕ್ಕಾಗಿ ಜೋಡಿ ಕೊಲೆ ಮಾಡಲಾಗಿದೆಯೇ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

D-Murder-1

► Follow us on –  Facebook / Twitter  / Google+

Facebook Comments

Sri Raghav

Admin