ಆಟೋ-ಕಾರು ಡಿಕ್ಕಿ ಮೂವರು ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

accident
ಹೊಸಕೋಟೆ, ಸೆ.27- ಪ್ಯಾಸೆಂಜರ್ ಆಟೋ ಮತ್ತು ಇಂಡಿಕಾ ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಸುನೀಲ್ ಸೇರಿದಂತೆ 17 ಮಂದಿ ಮಹಿಳಾ ಕೂಲಿಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಹೆಬ್ಬಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಶಾಂತಿಪುರ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಸಮೀಪ ಪ್ಯಾಸೆಂಜರ್ ಆಟೋದಲ್ಲಿ 17 ಮಂದಿ ಮಹಿಳಾ ಕೂಲಿ ಕಾರ್ಮಿಕರು ಶುಂಠಿ ಕೆಲಸಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ಘಟನೆಯಿಂದ ಎಲ್ಲರೂ ಗಾಯಗೊಂಡಿದ್ದು, ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.ಈ ಸಂಬಂಧ ಹೆಬ್ಬಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin