ಚಾಕುವಿನಿಂದ ಶಿಕ್ಷಕನನ್ನೇ ಇರಿದು ಕೊಂದ ಶಿಷ್ಯಂದಿರು

ಈ ಸುದ್ದಿಯನ್ನು ಶೇರ್ ಮಾಡಿ

Teache-01

ನವದೆಹಲಿ, ಸೆ.27- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದಿಲ್ಲೊಂದು ಅಪರಾಧ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಈಗ ಅಂತಹದ್ದೊಂದು ಪ್ರಕರಣ ನಡೆದಿದೆ. ಸರಿಯಾದ ಹಾಜರಾತಿಯಿಲ್ಲದ ಕಾರಣಕ್ಕಾಗಿ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕನೊಬ್ಬ ಹೊರಹಾಕಿದ ಹಿನ್ನೆಲೆಯಲ್ಲಿ ಕೋಪಗೊಂಡ ವಿದ್ಯಾರ್ಥಿಗಳು ಶಿಕ್ಷಕರೊಬ್ಬರಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಇರಿತಕ್ಕೊಳಗಾದ ಶಿಕ್ಷಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿ ಶಿಕ್ಷಕ ಮುಖೇಶ್ ಕುಮಾರ್ ಮೃತ ದುರ್ದೈವಿಯಾಗಿದ್ದು, ಸೋಮವಾರ ಸರ್ಕಾರಿ ಶಾಲೆಯಲ್ಲಿ 12 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಅದರಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮುಖೇಶ್ ಕುಮಾರ್ ಜತೆ ವಾದ ಮಾಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಹಪಾಠಿಯಾಗಿದ್ದ ಮತ್ತಿಬ್ಬರು ವಿದ್ಯಾರ್ಥಿಗಳು ಶಿಕ್ಷಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಶಿಕ್ಷಕನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin