ವಿಳಾಸ ಕೇಳುವ ನೆಪದಲ್ಲಿ ಮಾಂಗಲ್ಯ ಸರ ಕಳವು

ಈ ಸುದ್ದಿಯನ್ನು ಶೇರ್ ಮಾಡಿ

chain--snacher

ಕುಣಿಗಲ್ ,ಸೆ.28- ವಿಳಾಸ ಕೇಳುವ ನೆಪದಲ್ಲಿ ಬೈಕ್‍ಧಾರಿಗಳು, ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಅಮೃತೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶೋಭ ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ. ತಾಲ್ಲೂಕಿನ ಅಮೃತೂರು ಗ್ರಾಮದ ನಿವಾಸಿಯಾದ ಶೋಭ ಅವರು, ಯಾಚನಹಳ್ಳಿಗೆ ತೆರಳಿ ಬಟ್ಟೆ ತೆಗೆದುಕೊಂಡು ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಬೈಕ್‍ನಲ್ಲಿ ಬಂದ ಮೂವರು ಖದೀಮರು ವಿಳಾಸ ಕೇಳುವ ನೆಪದಲ್ಲಿ ಇವರ ಬಳಿ ಬಂದು ಮಹಿಳೆಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಇದರಿಂದ ತಬ್ಬಿಬ್ಬಾದ ಶೋಭಾ ಜೋರಾಗಿ ಕಿರುಚಿಕೊಂಡರೂ ಪ್ರಯೋಜನವಾಗಿಲ್ಲ. ಈ ಸಂಬಂಧ ಅಮೃತೂರು ಪೊ ಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin