ಮನೆ ಬಾಗಿಲು ಮುರಿದು ಚಿನ್ನಾಭರಣ- ನಗದು ಕಳವು

ಈ ಸುದ್ದಿಯನ್ನು ಶೇರ್ ಮಾಡಿ

robbery

ಕೋಲಾರ,ಸೆ.29-ಮನೆಯ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಒಂದು ಲಕ್ಷ ರೂ. ಚಿನ್ನಾಭರಣ ಸೇರಿದಂತೆ ಒಂದು ಲಕ್ಷ ನಗದು ದೋಚಿರುವ ಘಟನೆ ನಗರದ ಪಿಸಿ ಬಡಾವಣೆಯಲ್ಲಿ ನಡೆದಿದೆ. ಶ್ರೀನಿವಾಸಗೌಡ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು , ಮನೆಯವರೆಲ್ಲ ಕೆಲಸಕ್ಕೆ ಹೋಗಿದ್ದಾಗ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಸುಮಾರು 150 ಗ್ರಾಂ ಚಿನ್ನಾಭರಣ, ಒಂದು ಲಕ್ಷಕ್ಕೂ ಹೆಚ್ಚು ಹಣ ಸೇರಿದಂತೆ ಹಲವು ವಸ್ತುಗಳು ಕಳುವಾಗಿದೆ ಎಂದು ಕೋಲಾರ ನಗರ ಠಾಣೆಗೆ ದೂರು ನೀಡಲಾಗಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin