ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

HANGING

ಕೊರಟಗೆರೆ, ಅ.1– ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ವೀರಹೋಬನಹಳ್ಳಿ ಗ್ರಾಮದಲ್ಲಿ ನಡೆದಿದೆ.ರವಿಕುಮಾರ್ (22) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.ಈತ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಗ್ರಾಮಕ್ಕೆ ಬಂದು ತನ್ನ ತಾಯಿಯನ್ನು ಮಾತನಾಡಿಸಿಕೊಂಡು ನಂತರ ಗ್ರಾಮದೇವತೆ ಮಾರಮ್ಮ ದೇವಾಲಯದ ಬಳಿ ಇರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈತ ಬೆಂಗಳೂರಿನಲ್ಲಿ ಸಾಲ ಮಾಡಿಕೊಂಡಿದ್ದ. ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಈ ಸಂಬಂಧ ಕೊರಟಗೆರೆ ಠಾಣೆ ಇನ್ಸ್‍ಪೆಕ್ಟರ್ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

 

► Follow us on –  Facebook / Twitter  / Google+

Facebook Comments

Sri Raghav

Admin