ಜಯಲಲಿತಾ ಆರೋಗ್ಯದ ಬಗ್ಗೆ ಹರಿದಾಡುತ್ತಿವೆ ನಾನಾ ವದಂತಿ

ಈ ಸುದ್ದಿಯನ್ನು ಶೇರ್ ಮಾಡಿ

Jayalalth-a01

ಚನ್ನೈ, ಅ.2- ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅಲ್ಲಿನ ಜನರು ಆತಂಕಕ್ಕೊಳಗಾಗಿದ್ದಾರೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.ಅವರ ಆರೋಗ್ಯ ಪರಿಸ್ಥಿತಿ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ನಾನಾ ವದಂತಿಗಳು ಹಬ್ಬಿವೆ. ಆಸ್ಪತ್ರೆಯವರು ಯಾವುದೇ ಸ್ಪಷ್ಟೀಕರಣ ನೀಡಿಲ್ಲ. ಆದರೆ, ನಿನ್ನೆ ರಾಜ್ಯಪಾಲರು ಮತ್ತು ಸಂಪುಟದ ಹಲವು ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿಕೊಂಡು ಬಂದಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಲಂಡನ್ನಿಂದ ಬಂದ ಬ್ರಿಡ್ಜ್ ಆಸ್ಪತ್ರೆಯ ಡಾ.ಜಾನ್ ಅವರು ಜಯಲಲಿತಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸಿಎಂ ಜಯಲಲಿತಾ ಅವರು ಯಾವ ಕಾಯಿಲೆಯಿಂದ ನರಳುತ್ತಿದ್ದಾರೆ, ಅವರಿಗೆ ಏನಾಗಿದೆ ಎಂಬ ಯಾವುದೇ ಮಾಹಿತಿಯನ್ನು ಆಸ್ಪತ್ರೆಯವರಾಗಲಿ, ಸರ್ಕಾರದವರಾಗಲಿ ಬಹಿರಂಗಪಡಿಸುತ್ತಿಲ್ಲ.  ಜಯಾ ಅಭಿಮಾನಿಗಳು ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ. ನೆಚ್ಚಿನ ಅಮ್ಮನಿಗೆ ಏನಾಗಿದೆಯೋ, ಏನೋ ಎಂಬ ಆತಂಕ ಹೆಚ್ಚಾಗಿದೆ. ನಿನ್ನೆ ಸಂಪುಟ ಸಚಿವರು, ರಾಜ್ಯಪಾಲರು ಭೇಟಿ ಮಾಡಿದ್ದರು. ಪತ್ರಿಕಾ ಹೇಳಿಕೆ ನೀಡಿ ಸಚಿವರು, ಜಯಲಲಿತಾ ಅವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

ಅಪೋಲೋ ಆಸ್ಪತ್ರೆ ಸುತ್ತ ಹೆಚ್ಚಿನ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಯಲಲಿತಾ ಅವರ ಆರೋಗ್ಯದ ಬಗ್ಗೆ ಯಾವುದೇ ವದಂತಿಗಳನ್ನು ಹಬ್ಬಿಸದಂತೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ವದಂತಿಗಳನ್ನು ಹಬ್ಬಿಸಿದ ಹಲವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin