ಇಂದು ಮತ್ತೆ ವಿಶೇಷ ಕಾವೇರಿ ವಿಧಾನಮಂಡಲ ಅಧಿವೇಶನ (Live)

ಈ ಸುದ್ದಿಯನ್ನು ಶೇರ್ ಮಾಡಿ

Session

ಬೆಂಗಳೂರು, ಅ.3 : ಇಂದು ಮತ್ತೆ ವಿಧಾನಮಂಡಲ  ವಿಶೇಷ ಅಧಿವೇಶನ ಕರೆಯಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ನಿರ್ಣಯ ಕೈಗೊಳ್ಳುವುದಕ್ಕೆ ಹತ್ತು ದಿನದ ಫಾಸಲೆಯೊಳಗೆ ಕರೆಯುತ್ತಿರುವ ಎರಡನೇ ವಿಶೇಷ ಅಧಿವೇಶನ ಇದು. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ನಿರ್ಣಯ ಅಂಗೀಕರಿಸುವ ಸಾಧ್ಯತೆ ಕೂಡ ಇದೆ. ಅಕ್ಟೋಬರ್ 1ರಿಂದ 6ರವರೆಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಸೆಪ್ಟೆಂಬರ್ 30ರಂದು ಸುಪ್ರೀಂ ಕೊರ್ಟ್ ಸೂಚನೆ ನೀಡಿತ್ತು. ಇನ್ನು ಅಕ್ಟೋಬರ್ 4ರೊಳಗೆ ಕಾವೇರಿ ನೀರು ನಿರ್ವಹಣಾ ಮಂಡಳಿ ಕೂಡ ರಚಿಸುವಂತೆ ಆದೇಶಿಸಿತ್ತು. ಸೆಪ್ಟೆಂಬರ್ 30ರಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ ಬಂದ ಅಭಿಪ್ರಾಯದ ಅನ್ವಯ ರಾಜ್ಯ ಸರಕಾರ ವಿಶೇಷ ಅಧಿವೇಶನವನ್ನು ಕರೆದಿದೆ.

updates awaiting….

Facebook Comments

Sri Raghav

Admin