ಅಪಘಾತ : ಹೆದ್ದಾರಿ ತಡೆದು ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

accident

ಕೊಳ್ಳೇಗಾಲ, ಅ.4- ರಸ್ತೆ ದಾಟುತ್ತಿದ್ದ ಪಾದಚಾರಿಗೆ ಟಾಟಾಸುಮೋ ಡಿಕ್ಕಿ ಹೊಡೆದು ಅಪಘಾತವೆಸಗಿ ವಾಹನ ನಿಲ್ಲಿಸದೆ ಪರಾರಿಯಾಗಿರುವ ಘಟನೆ ಖಂಡಿಸಿ ಕೇರಂಬಳ್ಳಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ 212ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.ಕೇರಂಬಳ್ಳಿ ಗ್ರಾಮದ ರಾಚಯ್ಯ(50) ಎಂಬುವರು ಕೂಲಿ ಕೆಲಸ ಮುಗಿಸಿಕೊಂಡು ರಾತ್ರಿ 7.30ರಲ್ಲಿ ಬಸ್‍ನಲ್ಲಿ ಬಂದು ರಾಷ್ಟ್ರೀಯ ಹೆದ್ದಾರಿ 212ರಲ್ಲಿ ಇಳಿದಿದ್ದಾರೆ. ಗ್ರಾಮಕ್ಕೆ ತೆರಳಲು ರಾಚಯ್ಯ ರಸ್ತೆ ದಾಟುತ್ತಿದ್ದಾಗ ಅತಿವೇಗವಾಗಿ ಬಂದ ಟಾಟಾಸುಮೋ ಇವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಅಪಘಾತದಲ್ಲಿ ರಾಚಯ್ಯ ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ಕಾಲು ಮುರಿದಿದೆ. ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ರಾತ್ರಿ 11 ಗಂಟೆವರೆಗೂ ಪ್ರತಿಭಟಿಸಿದ್ದಾರೆ.ಗಂಭೀರವಾಗಿ ಗಾಯಗೊಂಡಿದ್ದ ರಾಚಯ್ಯ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರ ಸ್ಥಿತಿ ಚಿಂತಾಜನಕವಾಗಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿಷಯ ತಿಳಿದ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರತಿಭಟನಾ ನಿರತರನ್ನು ಸಮಾಧಾನಪಡಿಸಿ ಕಳುಹಿಸಿದ್ದಾರೆ.ಈ ಬಗ್ಗೆ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತವೆಸಗಿದ ಚಾಲಕನಿಗಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

 

 

► Follow us on –  Facebook / Twitter  / Google+

 

Facebook Comments

Sri Raghav

Admin