ಮಾಂಗಲ್ಯ ಸರ ಎಗರಿಸಿದ್ದ ಪದವೀಧರ ಸೇರಿ ಮೂವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

chain

ದಾವಣಗೆರೆ, ಅ.5- ಮಾಂಗಲ್ಯಸರ ದೋಚುತ್ತಿದ್ದ ಹಾಗೂ ಅಡವಿದಾರ ಸೇರಿದಂತೆ ಮೂವರನ್ನು ಬಂಧಿಸಿದ್ದು, ಅವರಲ್ಲಿ ಒಬ್ಬ ಪದವೀಧರನಾಗಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಶಂಕರ್ ಗುಳೇದ್ ಅವರು ತಿಳಿಸಿದ್ದಾರೆ.ಕೂಡ್ಲಿಗಿ ತಾಲೂಕಿನ ವಿನಯ್ ಅಲಿಯಾಸ್ ವಿನಯ್ ಪ್ರಸಾದ್, ವೆಂಕಟೇಶ್ ನಾಯಕ್, ಗಜೇಂದ್ರ ನಾಯಕ್ ಬಂಧಿತ ಆರೋಪಿಗಳು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗಳೂರಿನ ಸಮೀಪ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಒಂಟಿ ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದರು. ಅವರನ್ನು ಹಿಡಿಯುವಲ್ಲಿ ಜಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಬಂಧಿತರಲ್ಲಿ ಗಜೇಂದ್ರ ನಾಯಕ್ ಎಂಬಿಎ ಪದವೀಧರನಾಗಿದ್ದು, ರ್ಯಾಂಕ್ ಪಡೆದಿರುವುದಾಗಿ ತಿಳಿದುಬಂದಿದೆ.ಮೂವರನ್ನೂ ವಿಚಾರಣೆಗೆ ಒಳಪಡಿಸಿದಾಗ ಈ ಹಿಂದೆ ಚಿತ್ರದುರ್ಗ ಸಮೀಪದ ಮಲ್ಲಾಪುರ, ಗೊಲ್ಲರಹಟ್ಟಿ, ಬಂಡಿನ ಕುರುಬರಹಟ್ಟಿ ಸೇರಿದಂತೆ ಮುಂತಾದ ಕಡೆಗಳಲ್ಲಿ ಸರಗಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಇವರಿಂದ 3 ಲಕ್ಷದ 50 ಸಾವಿರ ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಕದ್ದ ಚಿನ್ನಾಭರಣಗಳನ್ನು ಆಟಿಕಾ ಕಂಪೆನಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನೂ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin