ದ್ವಿಚಕ್ರ ವಾಹನ ಕಳ್ಳನ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

arrest

ಕೋಲಾರ, ಅ.6- ನಕಲಿ ಕೀ ಬಳಸಿ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸಿದ ಪೊಲೀಸರು 21 ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಹೊಸಕೋಟೆ ನಿವಾಸಿ ಸಲೀಂ(30) ಬಂಧಿತ ಆರೋಪಿ.ಈತ ಹೊಸಕೋಟೆ ವೈಟ್‍ಫೀಲ್ಡ್‍ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ನಕಲಿ ಕೀ ಬಳಸಿ ಕಳ್ಳತನ ಮಾಡಿ ನಂತರ ವಾಹನದ ನಂಬರ್ ಪ್ಲೇಟ್ ಬದಲಾಯಿಸಿ ಮಾರಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ.ಕಳ್ಳತನ ಮಾಡಿದ ಬೈಕ್‍ಗಳಲ್ಲಿ ಹಲವು ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಈತನ ಬಳಿ ಇದ್ದ 21 ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin