ಕೊಲ್ಕೊತ್ತಾದಲ್ಲಿ ಗ್ಯಾಸ್ ಸಿಲಿಂಡರ್ ಗೋದಾಮಿನಲ್ಲಿ ಬೆಂಕಿ : ಮೂವರು ಸಜೀವ ದಹನ

ಈ ಸುದ್ದಿಯನ್ನು ಶೇರ್ ಮಾಡಿ

Gas-Blast

ಕೊಲ್ಕತ, ಅ.7-ಇಲ್ಲಿನ ತಂಗ್ರಾ ಪ್ರದೇಶದ ಗ್ಯಾಸ್ ಸಿಲಿಂಡರ್ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ದುರಂತದಿಂದ ಮೂವರು ಸುಟ್ಟು ಕರಕಲಾಗಿದ್ದಾರೆ. ಕೊಲ್ಕತ್ತ ನಗರದ ಕ್ರಿಸ್ಟೋಫರ್ ರಸ್ತೆಯಲ್ಲಿನ ಅನಿಲ ಸಿಲಿಂಡರ್ ಉಗ್ರಾಣದಲ್ಲಿ ನಿನ್ನೆ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದ ಏಳು ವಾಹನಗಳೊಂದಿಗೆ ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಎರಡು ಗಂಟೆಗಳ ಕಾಲ ಸೆಣಸಾಡಿ ಅಗ್ನಿಯ ಪ್ರಕೋಪವನ್ನು ನಿಯಂತ್ರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಈ ದುರಂತದಲ್ಲಿ ಮೂವರು ಸುಟ್ಟು ಕರಕಲಾಗಿದ್ದಾರೆ. ಗೋದಾಮು ಸಂಪೂರ್ಣ ಭಸ್ಮವಾಗಿದೆ ಎಂದು ನಗರ ಪೊಲೀಸ್ ಕಂಟ್ರೋಲ್ ರೂಮ್ ಅಧಿಕಾರಿಗಳು ಹೇಳಿದ್ದಾರೆ. ಅಗ್ನಿ ಆಕಸ್ಮಿಕ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.

► Follow us on –  Facebook / Twitter  / Google+

Facebook Comments

Sri Raghav

Admin