ಸರಣಿ ರಜೆಗಳ ಹಿನ್ನೆಲೆಯಲ್ಲಿ ಅ.13ವರೆಗೂ ಕೆಎಸ್‍ಆರ್‍ಟಿಸಿ ವಿಶೇಷ ಬಸ್ ಸೇವೆ

ಈ ಸುದ್ದಿಯನ್ನು ಶೇರ್ ಮಾಡಿ

KSRTC01

ಬೆಂಗಳೂರು, ಅ.10-ಮೈಸೂರು ದಸರಾ ಹಾಗೂ ಸರಣಿ ಸರ್ಕಾರಿ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದನ್ನು ಗಮನಿಸಿದ ಕೆಎಸ್‍ಆರ್‍ಟಿಸಿ ವಿಶೇಷ ಸಾರಿಗೆ ಸೇವೆಯನ್ನು ಅಕ್ಟೋಬರ್ 13ರವರೆಗೂ ಮುಂದುವರೆಸಲಿದೆ. ಹಬ್ಬಗಳು ಹಾಗೂ ಸರಣಿ ಸರ್ಕಾರಿ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‍ಆರ್‍ಟಿಸಿ ಅಕ್ಟೋಬರ್ 7ರಿಂದ 1500 ವಿಶೇಷ ಬಸ್ ಸೇವೆಯನ್ನು ಒದಗಿಸಿತ್ತು. ವಿಶ್ವ ವಿಖ್ಯಾತ ಮೈಸೂರು ದಸರಾ ಅಂಗವಾಗಿ 325 ವಿಶೇಷ ಬಸ್ ಸೇವೆಯನ್ನು ಆರಂಭಿಸಿದೆ.  ಪ್ರವಾಸಿಗರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಹೆಚ್ಚುವರಿಯಾಗಿ 150 ಬಸ್‍ಗಳನ್ನು ಮೈಸೂರಿಗೆ ಒದಗಿಸಲಾಗಿದೆ. ಅಲ್ಲದೆ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ,ಕೆಆರ್‍ಎಸ್, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಹುಣಸೂರು, ಚಾಮರಾಜನಗರ, ಕೆ.ಆರ್.ನಗರ ಮತ್ತಿತರ ನಗರ-ಪಟ್ಟಣಗಳಿಗೆ 325 ಬಸ್ ಸೇವೆ ಒದಗಿಸಲಾಗಿದೆ.

ಇದೆ ರೀತಿ ಬೆಂಗಳೂರು ಹಾಗೂ ಇತರೆ ನಗರಗಳಿಂದಲೂ ಪ್ರವಾಸಿ ತಾಣ, ಧಾರ್ಮಿಕ ಸ್ಥಳಗಳಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ರಾಜಧಾನಿ ಹಾಗೂ ಬೇರೆ ಬೇರೆ ನಗರಗಳ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ವಿಶೇಷ ಬಸ್ ಸೌಲಭ್ಯಕಲ್ಪಿಸಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಮೂಲಗಳು ತಿಳಿಸಿವೆ.

► Follow us on –  Facebook / Twitter  / Google+

Facebook Comments

Sri Raghav

Admin