ಇಸ್ಪೀಟ್ ಅಡ್ಡೆ ಮೇಲೆ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

cards

ಬೆಳಗಾವಿ,ಅ.10-ಇಸ್ಪೀಟ್ ಅಡ್ಡೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು 50 ಜನರನ್ನು ಬಂಧಿಸಿ ಪಣಕ್ಕಟ್ಟಿದ್ದ 40 ಸಾವಿರ ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ಬೋರಗಾಂವ್ ಗ್ರಾಮದಲ್ಲಿ ಮಧ್ಯರಾತ್ರಿ ಇಸ್ಪೀಟ್ ಆಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ 50 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸದಲಗ ಪೊಲೀಸ್ ಠಾಣೆಯ ಪಿಎಸ್‍ಐ ಹೊಸಬನಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಈ ಸಂಬಂಧ ಸದಲಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

 

Facebook Comments

Sri Raghav

Admin