ಸ್ಕಾರ್ಪಿಯೋ ಬೈಕ್‍ಗೆ ಡಿಕ್ಕಿ : ಒಂದೇ ಕುಟುಂಬದ ನಾಲ್ವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

deadly--accident

ಬೆಳಗಾವಿ,ಅ12- ಸ್ಕಾರ್ಪಿಯೋ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಮಚ್ಚೆ ಗ್ರಾಮದ ವಾಘವಡೆ ಕ್ರಾಸ್ ರಾಷ್ಟ್ರೀಯ ಹೆದ್ದಾರಿ 4ರ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಫಕ್ಕಿರಪ್ಪ (25), ಗಂಗವ್ವ (22), ರಾಧಿಕ(5), ನೀಲಕಂಠ(3) ಮೃತಪಟ್ಟವರಾಗಿದ್ದಾರೆ. ಸ್ಕಾರ್ಪಿಯೋವಿನ ಚಾಲಕ ರಭಸವಾಗಿ ವಾಹನ ಚಲಿಸಿದ್ದರಿಂದ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಬೈಕ್‍ಗೆ ಗುದ್ದಿದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು ಚಿಕ್ಕ ಮಕ್ಕಳು ಸೇರಿದಂತೆ ಒಂದೇ ಕುಟುಂದ ನಾಲ್ವರು ಬಲಿಯಾಗಿದ್ದಾರೆ. ಮೃತರು ಕುಂಟುಬ ಸಮೇತರಾಗಿ ಬೆಳಗಾವಿಯಿಂದ ಖಾನಾಪುರಕ್ಕೆ ತೆರಳುತ್ತಿದ್ದರು.  ಈ ಸಂಬಂಧ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin