ಬಸ್ ಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ, ಕಂಡಕ್ಟರ್‍ಗೆ ಥಳಿಸಿದ ವಿದ್ಯಾರ್ಥಿ

ಈ ಸುದ್ದಿಯನ್ನು ಶೇರ್ ಮಾಡಿ

Bus-Fight

ಕೋಲಾರ, ಅ.14– ಬಸ್ ಪಾಸ್ ತೋರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಂಡಕ್ಟರ್‍ಅನ್ನು ವಿದ್ಯಾರ್ಥಿಯೊಬ್ಬ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೋಲಾರ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಂಡಕ್ಟರ್ ಮುರಳೀಧರ್ ಥಳಿತಕ್ಕೊಳಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.  ಸಿಬಿಐಟಿ ಕಾಲೇಜು ವಿದ್ಯಾರ್ಥಿ ರವೀಂದ್ರ ಪಾಸ್ ತೋರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಾಗ ಈತ ಕಂಡಕ್ಟರನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಕಂಡಕ್ಟರ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೆಎಸ್‍ಆರ್‍ಟಿಸಿ ಸಿಬ್ಬಂದಿ ವಿದ್ಯಾರ್ಥಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೋಲಾರ ನಗರ ಠಾಣೆಯಲ್ಲಿ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin