ಬಿಸಿಎಂ ಹಾಸ್ಟೆಲ್‍ನಲ್ಲಿ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಈ ಸುದ್ದಿಯನ್ನು ಶೇರ್ ಮಾಡಿ

Girl-Suicide

ರಾಯಚೂರು, ಅ.14– ಪಿಯುಸಿ ಮೊದಲ ವರ್ಷದ ವಿದ್ಯಾರ್ಥಿನಿ ಬಿಸಿಎಂ ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂಧನೂರಿನಲ್ಲಿ ನಡೆದಿದೆ.
ತನುಜಾ (17) ಮೃತ ಯುವತಿ. ಎಸಿಎಂ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಯುವತಿ ಸಿಂಧನೂರು ನಗರದ ಬಿಸಿಎಂ ವಸತಿ ನಿಲಯದಲ್ಲಿದ್ದಳು. ಹಬ್ಬಕ್ಕೆ ಊರಿಗೆ ಹೋಗಿ ಬಂದವಳು ನಿನ್ನೆ ತಡರಾತ್ರಿ ನೇಣಿಗೆ ಶರಣಾಗಿದ್ದಾಳೆ. ವಸತಿ ನಿಲಯದ ಅಧಿಕಾರಿಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದಾವಿಸಿದ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin