ಭಾರತದ ಭದ್ರತೆಯ ಸೂಕ್ಷ್ಮ ಮಾಹಿತಿಗಳನ್ನು ಪಾಕ್ ಗೆ ರವಾನಿಸುತ್ತಿದ್ದ ಪೊಲೀಸ್ ಅಧಿಕಾರಿಯ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Arrested-01

ಶ್ರೀನಗರ, ಅ.14-ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆಗಳಿಗೆ ಭಾರತದ ಭದ್ರತೆ ವ್ಯವಸ್ಥೆ ಬಗ್ಗೆ ಅತ್ಯಂತ ಸೂಕ್ಷ್ಮ ಮಾಹಿತಿಗಳನ್ನು ರಹಸ್ಯವಾಗಿ ರವಾನಿಸುತ್ತಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.  ಡಿಎಸ್ಪಿಯನ್ನು ಸಸ್ಪೆಂಡ್ ಮಾಡಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಸಶಸ್ತ್ರ ಪೊಲೀಸ್ ನಿಯಂತ್ರಣ ಕೊಠಡಿಯ ಡಿಎಸ್ಪಿ ತನ್ವೀರ್ ಅಹಮದ್ ಈಗ ದೇಶದ್ರೋಹದ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಗಂಭೀರ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಕಾಶ್ಮೀರ ಕಣಿವೆಯಲ್ಲಿ ಈಗ ಉದ್ವಿಗ್ನ ಸ್ಥಿತಿ ಬಿಗಡಾಯಿಸಿರುವಾಗಲೇ ತನ್ವೀರ್ ಇಂಟರ್ ಸ್ಟೇಟ್ ಇಂಟೆಲಿಜೆನ್ಸ್ (ಐಎಸ್‍ಐ) ಸೇರಿದಂತೆ ಪಾಕಿಸ್ತಾನದ ಇತರ ಬೇಹುಗಾರಿಕೆ ಸಂಸ್ಥೆಗಳಿಗೆ ಭಾರತದ ಭದ್ರತಾ ವ್ಯವಸ್ಥೆ, ಆಯಾಕಟ್ಟಿನ ಸ್ಥಳದಲ್ಲಿ ನಿಯೋಜಿಸಲ್ಪಟ್ಟಿರುವ ಸೇನೆ ಮೊದಲಾದವುಗಳ ಬಗ್ಗೆ ಮಾಹಿತಿಗಳನ್ನು ರವಾನಿಸುತ್ತಿದ್ದರು ಎನ್ನಲಾಗಿದೆ. ಕೆಲವು ವರ್ಷಗಳಿಂದಲೂ ಇವರಿಂದ ಮಾಹಿತಿ ಸೋರಿಕೆಯಾಗಿರುವ ಸಾಧ್ಯತೆ ಇದ್ದು, ವಿಚಾರಣೆ ನಡೆಯುತ್ತಿದೆ.

ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ಕೆ. ರಾಜೇಂದ್ರ ಕುಮಾರ್ ತಪ್ಪಿತಸ್ಥ ಅಧಿಕಾರಿಯನ್ನು ಸ್ಪಸೆಂಡ್ ಮಾಡಿ ತನಿಖೆಗೆ ಆದೇಶಿಸಿದ್ದಾರೆ. ಗಡಿಯಾಚೆಯಿಂದ ಪಾಕಿಸ್ತಾನಿ ಏಜೆಂಟ್‍ಗಳೊಂದಿಗೆ ದೂರವಾಣಿಯಲ್ಲಿ ತನ್ವೀರ್ ನಿರಂತರ ಸಂಪರ್ಕ ಸಾಧಿಸುತ್ತಿರುವ ಬಗ್ಗೆ ಗೃಹ ಸಚಿವಾಲಯದಿಂದ ಮಾಹಿತಿಗಳು ಲಭಿಸಿದ್ದವು. ಈ ಹಿನ್ನೆಲೆಯಲ್ಲಿ ಡಿಎಸ್ಪಿಯನ್ನು ವಶಕ್ಕೆ ತೆಗೆದುಕೊಂಡು ಕೂಲಂಕಷ ವಿಚಾರಣೆಗೆ ಒಳಪಡಿಸಲಾಗಿದ್ದು, ಸ್ಫೋಟಕ ರಹಸ್ಯಗಳು ಬಯಲಾಗುವ ಸಾಧ್ಯತೆ ಇದೆ.

ತನ್ನನ್ನು ತಾನು ಸೇನಾ ಕಮ್ಯಾಂಡರ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಕಳೆದ ತಿಂಗಳು ಕಂಟ್ರೋಲ್ ರೂಂಗ್ ಕರೆ ಮಾಡಿದ. ಕಾಶ್ಮೀರ ಕಣಿವೆಯ ವಿವಿಧ ಸ್ಥಳಗಳಲ್ಲಿ ಪೊಲೀಸರು ಮತ್ತು ಅರೆ-ಸೇನಾ ಪಡೆಗಳ ನಿಯೋಜನೆಯ ವಿವರಗಳನ್ನು ಆತ ತನ್ನೊಂದಿಗೆ ವಿನಿಮಯ ಮಾಡಿಕೊಳ್ಳಲು ಬಯಸಿದ. ಈ ವಿವರಗಳನ್ನು ಹಂಚಿಕೊಳ್ಳುವುದಕ್ಕೂ ಮೊದಲು ಪೊಲೀಸ್ ವರಿಷ್ಠಾಧಿಕಾರಿ ಅವರಿಂದ ಅನುಮತಿ ಪಡೆಯಬೇಕು ಎಂದು ನಾನು ತಿಳಿಸಿದ್ದೆ ಎಂದು ತನ್ವೀರ್ ವಿಚಾರಣೆ ವೇಳೆ ತಿಳಿಸಿದ್ದಾನೆ. ಮೂಲಗಳ ಪ್ರಕಾರ ತನ್ವೀರ್ ಅಹಮದ್ ವ್ಯಾಟ್ಸಾಪ್ ಮೂಲಕ ಈ ವಿವರಗಳನ್ನು ನೀಡಿದ್ದಾನೆ. ಈವರೆಗೆ  ಡಿಎಸ್ಪಿ ಸ್ವೀಕರಿಸಿರುವ ಮತ್ತು ಸಂಭಾಷಣೆ ನಡೆಸಿರುವ ದೂರವಾಣಿ ಕರೆಗಳನ್ನು ಪರಿಶೀಲಿಸಲಾಗುತ್ತಿದೆ.  ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ (ಐಎಸ್‍ಐ) ಪರವಾಗಿ ಕಾರ್ಯನಿರ್ವಹಿಸಿಸುತ್ತಿದ್ದ ಇಬ್ಬರು ಐಎಸ್‍ಐ ಏಜೆಂಟ್‍ಗಳನ್ನು ಅನುಮಾನದ ಹಿನ್ನೆಲೆಯಲ್ಲಿ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಕಚ್ ಜಿಲ್ಲೆಯ ಖಾವ್ಡಾದಲ್ಲಿ ಬಂಧಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

► Follow us on –  Facebook / Twitter  / Google+

Facebook Comments

Sri Raghav

Admin