ವಿಜೃಂಭಣೆಯಿಂದ ನೆರವೇರಿದ ನಾಡ ದೇವತೆ ಚಾಮುಂಡೇಶ್ವರಿ ದೇವಿಯ ರಥೋತ್ಸವ

ಈ ಸುದ್ದಿಯನ್ನು ಶೇರ್ ಮಾಡಿ

Mysuru-01

ಮೈಸೂರು, ಅ.15- ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ರಥೋತ್ಸವ ವಿಜೃಂಭಣೆಯಿಂದ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಗ್ಗೆ ನೆರವೇರಿತು. ಬೆಳಗ್ಗೆ 7.45 ರಿಂದ 8.20ರೊಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ರಥೋತ್ಸವಕ್ಕೆ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು. ಅನಂತರ ದೇವಿಯ ರಥೋತ್ಸವ ದೇವಾಲಯದ ಸುತ್ತಲೂ ಸುತ್ತುಹಾಕಿತು. ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆದು ಪುನೀತರಾದರು. ಭಕ್ತರು ರಥದ ಮೇಲೆ ಹೂವು, ಬಾಳೆಹಣ್ಣು, ಜವನ ಎಸೆದು ಭಕ್ತಿ ಸಮರ್ಪಿಸಿದರು.

Mysuru-02

 

ಇದಕ್ಕೂ ಮುನ್ನ ಬೆಳಗ್ಗೆ 4 ಗಂಟೆಗೆ ದೇವಿಕೆರೆಯಿಂದ ಜಲ ತಂದು ದೇವಿಗೆ ಕಳಶ ಪೂಜೆ, ಗಣಪತಿ ಪೂಜೆ, ಜಲಾಭಿಷೇಕ, ಪಂಚಾಮೃತ ಅಭಿಷೇಕ, ವಿವಿಧ ಹೂಗಳಿಂದ ಅಲಂಕರಿಸಿ ಮಹಾ ಮಂಗಳಾರತಿ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಉತ್ಸವಮೂರ್ತಿ ಅಲಂಕಾರ ಮಾಡಿ ಮೆರವಣಿಗೆ ಮಾಡಲಾಯಿತು. ರಾಜಮಾತೆ ಪ್ರಮೋದಾದೇವಿ ಒಡೆಯರ್ ಯದುವೀರ್ ಪತ್ನಿ ತ್ರಿಷಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ, ಶಾಸಕ ಸೋಮಶೇಖರ್, ಜಿಲ್ಲಾಧಿಕಾರಿ ರಂದೀಪ್ ಮತ್ತಿತರರು ಭಾಗವಹಿಸಿದ್ದರು.

Mysuru-06

Mysuru-05

Mysuru-04
Mysuru-03

 

 

► Follow us on –  Facebook / Twitter  / Google+

Facebook Comments

Sri Raghav

Admin