ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತ.ನಾಡಿನಲ್ಲಿ ರೈಲು ತಡೆ

ಈ ಸುದ್ದಿಯನ್ನು ಶೇರ್ ಮಾಡಿ

1

ಚೆನ್ನೈ, ಅ.17- ಕಾವೇರಿ ನೀರು ನಿರ್ವಹಣಾ ಮಂಡಳಿ (ಸಿಎಂಬಿ) ರಚನೆಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳು ಇಂದು ತಮಿಳುನಾಡು ರಾಜ್ಯದ್ಯಾಂತ ರೈಲು ತಡೆ ಚಳವಳಿ ನಡೆಸಿದವು.ತಮಿಳುನಾಡು, ವಿಧಾನಸಭೆ ವಿರೋಧ ಪಕ್ಷದ ನಾಯಕ ಎಂ.ಕೆ.ಸ್ಟಾಲಿನ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ರೈಲ್- ರೋಖೋ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಚೆನ್ನೈ ಮತ್ತು ಕಾವೇರಿ ಜಲಾನಯನ ಪ್ರದೇಶಗಳ ಜಿಲ್ಲೆಗಳೂ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳವಳಿ ನಡೆದಿವೆ.ಕೇಂದ್ರ ಸರ್ಕಾರ ತಕ್ಷಣ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಬೇಕೆಂದು ಆಗ್ರಹಿಸಿ ರೈತರ ಒಕ್ಕೂಟವು ಎರಡು ದಿನಗಳ ರೈಲು ತಡೆ ಚಳವಳಿಗೆ ಕರೆ ನೀಡಿದೆ.

► Follow us on –  Facebook / Twitter  / Google+

 

Facebook Comments

Sri Raghav

Admin