ರುದ್ರೇಶ್ ಕೊಲೆ ಖಂಡಿಸಿ ಶಿವಾಜಿನಗರ ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು

ಈ ಸುದ್ದಿಯನ್ನು ಶೇರ್ ಮಾಡಿ

Shivajinagar-01

ಬೆಂಗಳೂರು, ಅ.17-ಶಿವಾಜಿನಗರದ ಕಾಮರಾಜ ರಸ್ತೆಯಲ್ಲಿ ನಿನ್ನೆ ನಡೆದ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಶಿವಾಜಿನಗರ ಬಂದ್ಗೆ ಆರ್ಎಸ್ಎಸ್ ಸಂಘಟನೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಸಂಚಾರ ವಿರಳವಾಗಿತ್ತು. ಶಿವಾಜಿನಗರದ ದಂಡು ಮಾರಿಯಮ್ಮ ಸರ್ಕಲ್ನಲ್ಲಿ ಆರ್ಎಸ್ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸರ್ಕಲ್ನಲ್ಲಿ ರುದ್ರೇಶ್ ಭಾವಚಿತ್ರಕ್ಕೆ ಹಾರ ಹಾಕಿ ಕೈಯಲ್ಲಿ ಆರ್ಎಸ್ಎಸ್ ಬಾವುಟ ಹಿಡಿದು ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದರು. ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು, ಕೆಆರ್ ಪುರ ಮಾಜಿ ಶಾಸಕ ನಂದೀಶ್ರೆಡ್ಡಿ, ವಿವಿಧ ಆರ್ಎಸ್ಎಸ್ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಹತ್ಯೆ ಘಟನೆಯನ್ನು ಖಂಡಿಸಲಾಯಿತು.
Police-1
ಮುನ್ನೆಚ್ಚರಿಕೆ ಕ್ರಮವಾಗಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಬಂದ್ ಹಿನ್ನೆಲೆಯಲ್ಲಿ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದೆ. ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಕನಕಪುರ ಸೇರಿದಂತೆ ಹಲವೆಡೆ ವ್ಯಾಪಕ ಶೋಧ ಮಾಡಲಾಗುತ್ತಿದೆ.  ನಿನ್ನೆ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ನಿನ್ನೆ ಆರ್ಎಸ್ಎಸ್ ಸಂಘಟನೆಯವರು ಏರ್ಪಡಿಸಿದ್ದ ಪಥ ಸಂಚಲನ ಕಾರ್ಯಕ್ರಮ ಮುಗಿಸಿಕೊಂಡು ಬಂದಾಗ ಪಲ್ಸರ್ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.

Police-2

ಈ ವಿಷಯ ನಗರವನ್ನು ಬೆಚ್ಚಿ ಬೀಳಿಸಿತ್ತು. ತಕ್ಷಣವೇ ಬಿಜೆಪಿ ಹಾಗೂ ಆರ್ಎಸ್ಎಸ್ ಮುಖಂಡರು ಪೊಲೀಸ್ ಠಾಣೆಗೆ ತೆರಳಿ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ್ದರು.
ಸಂಸದ ಪ್ರತಾಪ್ಸಿಂಹ, ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ಕೂಡ ನಡೆಸಲಾಗಿತ್ತು. ಇಂದು ಬಂದ್ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Police-0

► Follow us on –  Facebook / Twitter  / Google+

Police-3

Facebook Comments

Sri Raghav

Admin