ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ : ಬಿಎಸ್‍ವೈ

ಈ ಸುದ್ದಿಯನ್ನು ಶೇರ್ ಮಾಡಿ

Chief-Minister-BS-Yeddyurap

ಹಾಸನ,ಅ.18-ತಿಂಗಳಿಗೊಂದರಂತೆ ರಾಜ್ಯವನ್ನು ಬೆಚ್ಚಿ ಬೀಳಿಸುವಂತಹ ಹತ್ಯೆಗಳು ನಡೆಯುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್‍ನಲ್ಲಿ ಹಾಡು ಹಗಲೇ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್‍ನನ್ನು ಹತ್ಯೆ ಮಾಡಲಾಗಿರುವ ಆರೋಪಿಗಳನ್ನು ಎರಡು ದಿನಗಳು ಕಳೆದರೂ ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ ಯಡಿಯೂರಪ್ಪ, ಹತ್ಯೆ ಖಂಡಿಸಿ ನಾಳೆ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುದಾಗಿ ಹೇಳಿದರು.

ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವಲ್ಲಿಯೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದನ್ನು ಗಮನಿಸಿದರೆ ಸರ್ಕಾರ ಬದುಕಿದೆಯಾ ಎಂಬ ಅನುಮನಗಳು ಮೂಡುತ್ತವೆ ಎಂದು ವ್ಯಂಗ್ಯವಾಡಿದರು. ಸಚಿವರಾದವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

 

► Follow us on –  Facebook / Twitter  / Google+

Facebook Comments

Sri Raghav

Admin