ಜಮಖಂಡಿ : ಟಂಟಂ ವಾಹನಕ್ಕೆ ಕಾರು ಡಿಕ್ಕಿ ಹೊಡೆದುಒಂದೇ ಕುಟುಂಬದ ಮೂವರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

deadly--accident

ಬಾಗಲಕೋಟೆ, ಅ.19-ಟಂಟಂ ಆಟೋ ಮತ್ತು ಫಾರ್ಚೂನ್ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮಖಂಡಿ ತಾಲೂಕು ಮದರಕಂಡಿ ಬಳಿ ಇಂದು ಮುಂಜಾನೆ ಸಂಭವಿಸಿದೆ. ಮೃತರೆಲ್ಲರೂ ಟಂಟಂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಸಾಯಿಲ್ ರಾಜನ್ನವರ(32) ಹಾಗೂ ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಜಮಖಂಡಿಯಿಂದ ರಬಕವಿಯ ರಾಂಪೂರಕ್ಕೆ ಸುಮಾರು 7 ಮಂದಿ ಆಟೋದಲ್ಲಿ ತೆರಳುತ್ತಿದ್ದರು.  ನಸುಕಿನ 2.30ರ ಸಂದರ್ಭದಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಫಾರ್ಚೂನ್ ಕಾರು ರಭಸವಾಗಿ ಆಟೋಗೆ ಡಿಕ್ಕಿ ಹೊಡೆದಿದೆ.

ಇದರಿಂದಾಗಿ ಆಟೋ ರಸ್ತೆ ಬದಿ ಪಲ್ಟಿ ಹೊಡೆದು ತಂದೆ-ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನನ್ನು ಬಂಧಿಸಲಾಗಿದೆ. ಜಮಖಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin