ಡೆಂಘೀಜ್ವರಕ್ಕೆ ಅಂತಾರಾಷ್ಟ್ರೀಯ ಮಹಿಳಾ ಫುಟ್ಬಾಲ್ ಆಟಗಾರ್ತಿ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Poonam

ಬೆಂಗಳೂರು,ಅ.19-ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ಫುಟ್ಬಾಲ್ ಆಟಗಾರ್ತಿ ಪೂನಂ ಚೌವ್ಹಾಣ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಭವಿಷ್ಯದ ನಿರೀಕ್ಷೆಯಲ್ಲಿದ್ದ ಪ್ರತಿಭಾನ್ವಿತ ಪುಟ್ಭಾಲ್ ಆಟಗಾರ್ತಿ ಪೂನಂ ಚೌವ್ಹಾಣ್ ಕಳೆದ ಒಂದು ವಾರದಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದರು. ಕುಟುಂಬದವರು ಆಕೆಯನ್ನು ವಾರಣಾಸಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.  ಉತ್ತರ ಪ್ರದೇಶದಿಂದ ಭಾರತ ಫುಟ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಪದಕ ಗೆದ್ದಾಗ ಪೂನಂ ಚವ್ಹಾಣ್ ತಂಡದಲ್ಲಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin