ಯಾದಗಿರಿ ಕೆನರಾ ಬ್ಯಾಂಕ್‍ನಲ್ಲಿ ಬೆಂಕಿ

ಈ ಸುದ್ದಿಯನ್ನು ಶೇರ್ ಮಾಡಿ

Fire Bank-01

ಯಾದಗಿರಿ ಅ.19– ನಗರದ ಗಾಂಧಿ ವೃತ್ತದಲ್ಲಿರುವ ಕೆನರಾ ಬ್ಯಾಂಕ್‍ನಲ್ಲಿ ಕಳೆದ ರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬ್ಯಾಂಕ್‍ನ ಒಳಗಿರುವ ವಿದ್ಯುತ್ ನಿಯಂತ್ರಣ ಸ್ವಿಚ್ ಬೋರ್ಡ್‍ನಿಂದ ಬೆಂಕಿ ಹೊತ್ತಿಕೊಂಡಿರುವುದು ದೃಢಪಟ್ಟಿದೆ. ಇಂದು ಮುಂಜಾನೆ ಬ್ಯಾಂಕ್‍ನ ಕಿಟಕಿಗಳಿಂದ ಹೊಗೆ ಬರುತ್ತಿರುವುದನ್ನು ನೋಡಿ ಸಾರ್ವಜನಿಕರು ಅಗ್ನಿಶಾಮಕ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಗಾಜನ್ನು ಒಡೆದು ನೀರು ಸಿಂಪಡಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.  ಕೆಲ ಕಾಗದ ಪತ್ರಗಳು ಸುಟ್ಟು ಹೋಗಿದ್ದು, ಹೆಚ್ಚಿನ ಅಪಾಯವಾಗಿಲ್ಲ ಎಂದು ಬ್ಯಾಂಕ್‍ನ ವ್ಯವಸ್ಥಾಪಕರು ತಿಳಿಸಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin