ಶೀಘ್ರದಲ್ಲೇ ರುದ್ರೇಶ್ ಕೊಲೆ ಆರೋಪಿಗಳ ಬಂಧನ : ಸಿಎಂ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha-01

ಬೆಂಗಳೂರು, ಅ.19- ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ತನಿಖೆ ಕೈಗೊಂಡಿದ್ದು, ಶೀಘ್ರದಲ್ಲೇ ಕೊಲೆ ಆರೋಪಿಗಳನ್ನು ಬಂಧಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಸಂಪುಟಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು. ನಮ್ಮ ಕಾಲಕ್ಕಿಂತಲೂ ಬಿಜೆಪಿ ಆಡಳಿತದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹೆಚ್ಚು ಹದಗೆಟ್ಟಿತ್ತು. ಆದರೂ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ರೀತಿಯ ಡ್ರಾಮಾಗಳು ಬಿಜೆಪಿ ಕಾಲದಲ್ಲೇ ಹೆಚ್ಚಾಗಿದ್ದವು. ಇದು ಆರ್‍ಎಸ್‍ಎಸ್‍ನ ಸಂಸ್ಕøತಿಯಾಗಿದೆ ಎಂದು ಟೀಕಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin