ಸಿಹಿ ಸುದ್ದಿ : ಮುಂದಿನ ವರ್ಷದಿಂದ ವೃತ್ತಿ ಶಿಕ್ಷಣ ಕೋರ್ಸ್‍ಗಳಿಗೆ ಕನ್ನಡದಲ್ಲೂ ಸಿಇಟಿ ಪ್ರಶ್ನೆಪತ್ರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

CET01

ಬೆಂಗಳೂರು,ಅ.19-ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ರಾಜ್ಯ ಸರ್ಕಾರ ಮುಂದಿನ ಶೈಕ್ಷಣಿಕ ವರ್ಷದಿಂದ ವೃತ್ತಿ ಶಿಕ್ಷಣ ಕೋರ್ಸ್‍ಗಳಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಪ್ರಶ್ನೆ ಪತ್ರಿಕೆಗಳು ಕನ್ನಡದಲ್ಲು ದೊರೆಯುವಂತೆ ಹೊಸ ವ್ಯವಸ್ಥೆ ರೂಪಿಸಿದೆ ಲಭ್ಯವಾಗಲಿವೆ.  ಶೀಘ್ರದಲ್ಲೇ ಉನ್ನತ ಶಿಕ್ಷಣ ಇಲಾಖೆ ಈ ಸಂಬಂಧ ಅಧಿಸೂಚನೆ ಹೊರಡಿಸಲಿದ್ದು, 2016-17ರ ಮಾರ್ಚ್-ಏಪ್ರಿಲ್ ತಿಂಗಳ ಮಧ್ಯಭಾಗದಲ್ಲಿ ನಡೆಯಲಿರುವ ಸಿಇಟಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ದ್ವಿಭಾಷೆಯಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.

ನೂತನ ಪ್ರಶ್ನೆ ಪತ್ರಿಕೆ ಪ್ರಕಾರ ಇನ್ನು ಮುಂದೆ ಕನ್ನಡ, ಇಂಗ್ಲಿಷ್ ಜೊತೆಗೆ ಭೌತಶಾಸ್ತ್ರ, ರಸಾಯನಶಾಸ್ತ್ರ , ಗಣಿತ ಮತ್ತು ಜೀವಶಾಸ್ತ್ರ ಪ್ರಶ್ನೆ ಪತ್ರಿಕೆಗಳು ಕನ್ನಡದಲ್ಲೂ ಮುದ್ರಣವಾಗಲಿವೆ.
ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ ಹಾಗೂ ಕೃಷಿಗೆ ಸಂಬಂಧಿಸಿದ ಕೋರ್ಸ್‍ಗಳ ಪ್ರಶ್ನೆ ಪತ್ರಿಕೆಗಳು ಕನ್ನಡದಲ್ಲಿ ಸಿದ್ಧಗೊಳಲಿದೆ.
ಈವರೆಗೂ ಸಿಇಟಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಕೇವಲ ಇಂಗ್ಲಿಷ್‍ನಲ್ಲಿ ಮಾತ್ರ ಲಭ್ಯವಾಗುತ್ತಿತ್ತು. ಆದರೆ ಇದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತುಸು ಕಷ್ಟಕರವಾಗುತ್ತಿತ್ತು. ನಗರದ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧೆಯೊಡ್ಡಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಮನಗಂಡಿರುವ ರಾಜ್ಯ ಸರ್ಕಾರ ಇಂಗ್ಲಿಷ್ ಜೊತೆಗೆ ಕನ್ನಡದಲ್ಲೂ ಪ್ರಶ್ನೆ ಪತ್ರಿಕೆಗಳನ್ನು ಮುದ್ರಣ ಮಾಡಲಿದೆ.
ಈಗಾಗಲೇ ಇದರ ಸಾಧಕ-ಬಾಧಕಗಳ ಚರ್ಚೆ ನಡೆಸಲಾಗಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸುವುದರಿಂದ ಅನುಕೂಲವಾಗುತ್ತದೆ ಎಂದು ಶಿಕ್ಷಣ ತಜ್ಞರು ಸಹ ಅಭಿಪ್ರಾಯಪಟ್ಟಿದ್ದಾರೆ.

ಸಚಿವ ಶರಣ ಪ್ರಕಾಶ್ ಪಾಟೀಲ್ ತಿಂಗಳ ಹಿಂದೆಯೇ ಶಿಕ್ಷಣ ತಜ್ಞರು, ಪೋಷಕರು, ಸಾರ್ವಜನಿಕರು ಮತ್ತು ಕಾಲೇಜು ಆಡಳಿತ ಮಂಡಳಿಗಳ ಸಭೆ ನಡೆಸಿದ್ದರು. ಬಹುತೇಕರು ಗ್ರಾಮೀಣ ಅಭ್ಯರ್ಥಿಗಳಿಗೆ ಕನ್ನಡ ಪ್ರಶ್ನೆ ಪತ್ರಿಕೆ ತಯಾರಿಸುವುದು ಸೂಕ್ತ ಎಂದು ಸಲಹೆ ಮಾಡಿದ್ದರು.  ಇದನ್ನು ಮನಗಂಡಿರುವ ರಾಜ್ಯ ಸರ್ಕಾರ ಬರುವ ಶೈಕ್ಷಣಿಕ ವರ್ಷದಿಂದ ಸಿಇಟಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ದ್ವಿಭಾಷಾದಲ್ಲಿ ಮುದ್ರಿಸಲಿದೆ.  ಕಳೆದ ವರ್ಷ ರಾಜ್ಯದಲ್ಲಿ ಗ್ರಾಮೀಣ ಭಾಗದಿಂದ 2.87 ಲಕ್ಷ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಿಂದ , 3.48 ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮದಿಂದ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಮುಖ್ಯ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ ಗ್ರಾಮೀಣ ಅಭ್ಯರ್ಥಿಗಳು ಸಿಇಟಿಯಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಪರ್ಧೆಯೊಡ್ಡಲು ಸಾಧ್ಯವಾಗಿರಲಿಲ್ಲ.

► Follow us on –  Facebook / Twitter  / Google+

Facebook Comments

Sri Raghav

Admin