ಸಾಲಬಾಧೆಗೆ ರೈತ ವಿಷ ಸೇವಿಸಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

farmers

ದಾವಣಗೆರೆ,ಅ.21-ಸಾಲಬಾಧೆಗೆ ನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಕನ್ನನಾಯಕನಹಳ್ಳಿಯಲ್ಲಿ ನಡೆದಿದೆ. ಅಣ್ಣಪ್ಪ ನಾಯಕ(36) ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ ರೈತ ಅಣ್ಣಪ್ಪ ನಾಯಕನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಅವರ ವಿದ್ಯಾಭ್ಯಾಸಕ್ಕೆ ಮತ್ತು ಇತರೆ ಕೃಷಿ ಚಟುವಟಿಕೆಗಳಿಗೆ 5 ಲಕ್ಷ ರೂ. ಸಾಲ ಮಾಡಿದ್ದರು. ಬೆಳೆದ ಬೆಳೆಯಿಂದ ನಷ್ಟವಾಗಿದ್ದು, ಸಾಲ ತೀರಿಸುವುದಾದರು ಹೇಗೆಂದು ಚಿಂತಾಕ್ರಾಂತರಾಗಿದ್ದ ಅಣ್ಣಪ್ಪ ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಇವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಅಣ್ಣಪ್ಪ ನಾಯಕ ಮೃತಪಟ್ಟಿದ್ದಾರೆ. ಈ ಸಂಬಂಧ ಹರಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin